ಕರ್ನಾಟಕ

ಹಾಸನದಲ್ಲಿ 4ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ-ಕೊಲೆ ಮಾಡಿದ ಕಾಮುಕನ ಬಂಧನ

Pinterest LinkedIn Tumblr

ಹಾಸನ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಹಾಗೂ ಕೊಲೆ ಮಾಡಿದ ಕಾಮುಕನನ್ನು ಪೊಲೀಸರು ಬಂಧನಕ್ಕೊಳಪಡಿಸಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.

ಸುರೇಶ್ (21) ಬಂಧಿತ ಆರೋಪಿ. 4ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿಯನ್ನು ಅಪಹರಿಸಿದ್ದ ಆರೋಪಿ, ಆಕೆಯ ಮೇಲೆ ಅತ್ಯಾಚಾರ ನಡೆಸಿದ ಹತ್ಯೆ ಮಾಡಿದ್ದನೆಂದು ತಿಳಿದುಬಂದಿದೆ.

ಡಿಸೆಂಬರ್ 12 ರಂದು ತನ್ನ ತಮ್ಮನೊಂದಿಗೆ ಜಾತ್ರೆಗೆ ತೆರಳಿದ್ದಳು. ಈ ವೇಳೆ ಬಾಲಕಿಯನ್ನು ಆರೋಪಿ ಅಪಹರಿಸಿದ್ದ. ಎರಡು ದಿನಗಳಾದರೂ ಬಾಲಕಿ ಮನೆಗೆ ಮರಳದಿದ್ದಾಗ ಕುಟುಂಬಸ್ಥರು ದೂರು ದಾಖಲಿಸಿದ್ದರು. ತನಿಖೆ ಆರಂಭಿಸಿದ್ದ ಪೊಲೀಸರಿಗೆ ಬಾಲಕಿಯ ಮೃತದೇಹ ನೀರಿನ ಟ್ಯಾಂಕ್ ವೊಂದರಲ್ಲಿ ಪತ್ತೆಯಾಗಿತ್ತು.

ಪ್ರಕರಣ ಸಂಬಂಧ ಅದೇ ಗ್ರಾಮದ ನಿವಾಸಿಯಾಗಿದ್ದ ಸುರೇಶ್ ನನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಈ ವೇಳೆ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.

Comments are closed.