ಕರ್ನಾಟಕ

ತುಮಕೂರಿನಲ್ಲಿ 2ನೇ ಹಂತದ ಕಿಸಾನ್​ ಸಮ್ಮಾನ್​ ಯೋಜನೆ ಲೋಕಾರ್ಪಣೆ ಮಾಡಲಿರುವ ಪ್ರಧಾನಿ

Pinterest LinkedIn Tumblr


ತುಮಕೂರು: ಪ್ರಧಾನಿ ನರೇಂದ್ರ ಮೋದಿ ಅವರು ಜ.2ರಂದು ತುಮಕೂರಿಗೆ ಭೇಟಿ ನೀಡಿ ಕಿಸಾನ್ ಸಮ್ಮಾನ್ ಯೋಜನೆಯ 2 ನೇ ಹಂತ ಲೋಕಾರ್ಪಣೆ ನೆರವೇರಿಸಲಿದ್ದಾರೆ.

ತುಮಕೂರು ನಗರದ ಸರ್ಕಾರಿ ಜೂನಿಯರ್ ಕಾಲೇಜ್ ಮೈದಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಅಂದಾಜು ಒಂದು ಲಕ್ಷ ರೈತರು ಪಾಲ್ಗೊಳ್ಳಲಿದ್ದಾರೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದರು.

ಕಾರ್ಯಕ್ರಮ ನಡೆಯುವ ಸ್ಥಳ ಪರಿಶೀಲನೆ ನಡೆಸಿ ಅವರು ಮಾತನಾಡಿದರು.

ಸಂಜೆ ನಾಲ್ಕು ಗಂಟೆಗೆ ತುಮಕೂರಿಗೆ ಆಗಮಿಸುವ ಪ್ರಧಾನಿಗಳು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಲಿದ್ದಾರೆ. ಶಿವಕುಮಾರ ಸ್ವಾಮೀಜಿ ಅವರ ಗದ್ದುಗೆ ದರ್ಶನ ಮಾಡಿ ನಂತರ ಸಿದ್ದಲಿಂಗ ಸ್ವಾಮೀಜಿ ಅವರ ಆರ್ಶೀವಾದ ಪಡೆಯಲಿದ್ದಾರೆ.

ಮಠದ ವಿದ್ಯಾರ್ಥಿಗಳೊಂದಿಗೆ 10 ನಿಮಿಷ ಸಂವಾದ ನಡೆಸಲಿದ್ದಾರೆ. ಅಲ್ಲಿಂದ ವೇದಿಕೆಗೆ ತೆರಳಿ ಕಿಸಾನ್​ ಸಮ್ಮಾನ್​ ಯೋಜನೆ ಲೋಕಾರ್ಪಣೆ ನೆರವೇರಿಸಲಿದ್ದಾರೆ. ವೇದಿಕೆಯಲ್ಲಿ ರಾಷ್ಟ್ರವ್ಯಾಪಿ ಆಯ್ಕೆ ಮಾಡಿದ 40 ಪ್ರಗತಿಪರ ರೈತರನ್ನು ಇದೇ ವೇಳೆ ಸನ್ಮಾನಿಸಲಿದ್ದಾರೆ.

ಕಾರ್ಯಕ್ರಮಕ್ಕೆ ರೈತರನ್ನು ಕರೆತರಲು ಸಾವಿರ ಕೆಎಸ್​ಆರ್​ಟಿಸಿ ಬಸ್​ಗಳನ್ನು ವ್ಯವಸ್ಥೆ ಮಾಡಲಾಗಿದೆ. ಕಾರ್ಯಕ್ರಮ ಮುಗಿದ ನಂತರ ಪ್ರಧಾನಿ ಮೋದಿ ಅವರು ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

Comments are closed.