ಕರ್ನಾಟಕ

ಶೈಕ್ಷಣಿಕ ಪ್ರವಾಸದ ಸಂದರ್ಭ ವಿದ್ಯಾರ್ಥಿನಿಯರ ಮೈ, ಕೈ ಮುಟ್ಟಿ ಉಪನ್ಯಾಸಕನ ಡ್ಯಾನ್ಸ್

Pinterest LinkedIn Tumblr


ಬಾಗಲಕೋಟೆ: ಇತ್ತೀಚೆಗೆ ಶಿಕ್ಷಕಿಯರು ಡ್ಯಾನ್ಸ್ ಮಾಡಿದ್ದ ಘಟನೆ ಮಾಸುವ ಮುನ್ನವೇ ಕಾಲೇಜು ಉಪನ್ಯಾಸಕರು ವಿದ್ಯಾರ್ಥಿಗಳ ಜೊತೆ ಸೇರಿ ಅಶ್ಲೀಲ ಅರ್ಥದ ಹಾಡಿಗೆ ಹೆಜ್ಜೆ ಹಾಕಿರುವ ಪ್ರಕರಣ ಬೆಳಕಿಗೆ ಬಂದಿದೆ.

ಬಾಗಲಕೋಟೆ ಜಿಲ್ಲೆಯ ಬಾದಾಮಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಎಲ್.ಎಸ್ ನಾಗವಾಡ್ ಎಂಬ ಉಪನ್ಯಾಸಕ, ಶೈಕ್ಷಣಿಕ ಪ್ರವಾಸದ ವೇಳೆ ಬೀಚ್‍ನಲ್ಲಿ ವಿದ್ಯಾರ್ಥಿನಿಯರ ಮೈ, ಕೈ ಮುಟ್ಟಿ ಡ್ಯಾನ್ಸ್ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಅಲ್ಲದೆ ಶೈಕ್ಷಣಿಕ ಪ್ರವಾಸದ ವೇಳೆ ಅಶ್ಲೀಲ ಹಾಡಿಗೆ ನೃತ್ಯ ಮಾಡಿರುವ ವಿಡಿಯೋ ವೈರಲ್ ಆಗಿದೆ.

ಎರಡು ದಿನಗಳ ಕಾಲ ಪಿಯುಸಿ ವಿದ್ಯಾರ್ಥಿಗಳಿಗೆ ಕಾಲೇಜು ಶಿಕ್ಷಕರ ವೃಂದ ಪ್ರವಾಸ ಕಂಡಕ್ಟ್ ಮಾಡಿತ್ತು. ಅದರಂತೆ ಡಿಸೆಂಬರ್ 14ರಿಂದ 16ರವರೆಗೆ ಶಿಕ್ಷಕರ ಜೊತೆಗೆ ವಿದ್ಯಾರ್ಥಿಗಳು ಪ್ರವಾಸ ಕೈಗೊಂಡಿದ್ದರು. ಈ ವೇಳೆ ವಿದ್ಯಾರ್ಥಿನಿಯರ ಜೊತೆ ಪ್ರಾಚಾರ್ಯ ನಾಗವಾಡ ಅಸಭ್ಯವಾಗಿ ವರ್ತಿಸಿದ್ದಾನೆ. ಹಾಗೂ ಅಶ್ಲೀಲ ಅರ್ಥದ ಹಾಡಿಗೆ ಹೆಜ್ಜೆ ಹಾಕಿದ್ದಾನೆ. ಆತನ ವಿರುದ್ಧ ಕ್ರಮ ಕೈಗೊಳ್ಳುವಂತೆ ಕರವೇ ಕಾರ್ಯಕರ್ತರು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ದೂರು ಸಲ್ಲಿಸಿದ್ದರು.

ಅಹಿತಕರ ಘಟನೆ ಬಗ್ಗೆ ಬೆಂಗಳೂರು ಪದವಿ ಪೂರ್ವ ಶಿಕ್ಷಣ ಇಲಾಖೆಗೆ ಮಾಹಿತಿ ರವಾನಿಸಿದ್ದಾರೆ. ಆದರೆ ವಿದ್ಯಾರ್ಥಿ ಶೈಕ್ಷಣಿಕ ಪ್ರವಾಸ ಮುಗಿದು ಒಂದು ತಿಂಗಳಾಗ್ತಾ ಬಂದ್ರೂ ಅಂತಹ ಉಪನ್ಯಾಸಕನ ಬಗ್ಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಕ್ರಮಕೈಗೊಂಡಿಲ್ಲ ಎಂದು ಕರವೇ ಕಾರ್ಯಕರ್ತರು ಡಿಡಿಪಿಯು ಕಾರ್ಯವೈಖರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸ್ತಿದ್ದಾರೆ.

Comments are closed.