ಕರ್ನಾಟಕ

ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಸಿ.ಚನ್ನಿಗಪ್ಪ ನಿಧನ

Pinterest LinkedIn Tumblr

ತುಮಕೂರು: ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ರಾಜಕಾರಣಿ ಹಾಗೂ ಮಾಜಿ ಸಚಿವ ಸಿ.ಚನ್ನಿಗಪ್ಪ ಶುಕ್ರವಾರ ನಿಧನರಾಗಿದ್ದಾರೆ.

ಕೆಲ ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಸಿಂಗಾಪುರದಲ್ಲಿ ಚಿಕಿತ್ಸೆ ಕೊಡಿಸಿ ಬಳಿಕ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ಕೊನೆಯುಸಿರೆಳೆದಿದ್ದಾರೆ.

ಚನ್ನಿಗಪ್ಪ ಕೊರಟಗೆರೆ ವಿಧಾನಸಭಾ ಕ್ಷೇತ್ರದಿಂದ 3 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಧರಂಸಿಂಗ್ ಸರ್ಕಾರದ ಅವಧಿಯಲ್ಲಿ ಅಬಕಾರಿ ಸಚಿವರಾಗಿದ್ದರು. ಅಷ್ಟೇ ಅಲ್ಲದೇ ಎಚ್​. ಡಿ.ಕುಮಾರಸ್ವಾಮಿ ಅಧಿಕಾರವಧಿಯಲ್ಲಿ ಅರಣ್ಯ ಸಚಿವರಾಗಿದ್ದರು.

ಸಾಮಾನ್ಯ ರೈತ ಕುಟುಂಬದ ಚನ್ನಿಗಪ್ಪ, ಪೊಲೀಸ್ ಹುದ್ದೆ ತೊರೆದು ರಾಜಕೀಯ ಪ್ರವೇಶ ಮಾಡಿ ಅದರಲ್ಲಿ ಯಶಸ್ಸು ಕಂಡಿದ್ದರು. ಬಳಿಕ ಅವರ ಮಕ್ಕಳನ್ನೂ ರಾಜಕೀಯಕ್ಕೆ ಕರೆತಂದಿದ್ದು, ಪುತ್ರ ಡಿ.ಸಿ ಗೌರಿಶಂಕರ್ ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕರಾಗಿದ್ದಾರೆ.

ಜೆಡಿಎಸ್ ಪಕ್ಷದ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಸಿ. ಚೆನ್ನಿಗಪ್ಪ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಂತಾಪ ವ್ಯಕ್ತಪಡಿಸಿದ್ದಾರೆ.

Comments are closed.