ಹುಬ್ಬಳ್ಳಿ: ವಾರದ ಹಿಂದೆ ಕೆಎಲ್‌ಇ ಕಾಲೇಜು ವಿದ್ಯಾರ್ಥಿಗಳಿಂದ ಕೇಳಿ ಬಂದಿದ್ದ ಪಾಕ್ ಪರ ಘೋಷಣೆ, ಈಗ ಜಿಲ್ಲೆಯ ಸರ್ಕಾರಿ ಶಾಲೆಯ ಗೋಡೆಯ ಮೇಲೆ ಬರಹವಾಗಿ ಕಂಡಿದೆ. ಹೌದು, ಹುಬ್ಬಳ್ಳಿ ತಾಲೂಕಿನ ಬುಡರಶಿಂಗಿ ಗ್ರಾಮದ ಸರ್ಕಾರಿ ಶಾಲೆಯ ಗೋಡೆ ಮೇಲೆ ‘ಪಾಕಿಸ್ತಾನ ಜಿಂದಾಬಾದ್’ ಎಂಬ ಘೋಷಣೆಯನ್ನು ಬರೆಯಲಾಗಿದೆ.
ಶಾಲೆ ಗೋಡೆಗಳ ಮೇಲೆಲ್ಲಾ ಕೈ ಬರಹದಲ್ಲಿ ಪಾಕ್ ಪರ ಘೋಷಣೆಗಳನ್ನು ದುಷ್ಕರ್ಮಿಗಳು ಬರೆದಿದ್ದಾರೆ. ಅದರ ಜೊತೆ ಟಿಪ್ಪು ಸುಲ್ತಾನ ಶಾಲೆ ಎಂಬುದನ್ನು ಕೂಡ ಬರೆಯಲಾಗಿದೆ.
ಶಾಲಾ ಆಡಳಿತ ಮಂಡಳಿಯಿಂದ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿದೆ. ಮಾಹಿತಿ ನೀಡಿದರೂ ಸ್ಥಳಕ್ಕೆ ಆಗಮಿಸದ ಪೊಲೀಸರ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಮೊದಲು ಹುಬ್ಬಳ್ಳಿಯಲ್ಲಿ ಕೆಎಲ್‌ಇ ಕಾಲೇಜಿನ ಮೂವರು ಕಾಶ್ಮೀರಿ ವಿದ್ಯಾರ್ಥಿಗಳು ಪಾಕ್ ಪರ ಘೋಷಣೆ ಕೂಗಿ ವಿಡಿಯೋವೊಂದನ್ನು ಹರಿಬಿಟ್ಟಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಆ ನಂತರ ಆ ಮೂರು ವಿದ್ಯಾರ್ಥಿಗಳು ನ್ಯಾಯಾಂಗ ಬಂಧನದಲ್ಲಿದ್ದು, ಕಾಲೇಜಿನಿಂದ ಅವರನ್ನು ಅಮಾನತು ಮಾಡಲಾಗಿತ್ತು.
ಆ ನಂತರ, ಬೆಂಗಳೂರಿನಲ್ಲಿ ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಅಮೂಲ್ಯ ಲಿಯೋನ್ ಬಹಿರಂಗವಾಗಿಯೇ ಪಾಕ್ ಪರ ಘೋಷಣೆ ಕೂಗಿದ್ದಳು. ಈ ಘಟನೆಯಾಗಿ ಮರುದಿನವೇ ಆರ್ದಾ ಎಂಬ ಯುವತಿ ಟೌನ್‌ಹಾಲ್ ಹತ್ತಿರ ಫ್ರೀ ಕಾಶ್ಮೀರ ಭಿತ್ತಿ ಪತ್ರ ಹಿಡಿದು ಪೊಲೀಸರ ಅತಿಥಿಯಾಗಿದ್ದಳು.
Comments are closed.