ಬೆಂಗಳೂರು: ಯಡಿಯೂರಪ್ಪ ಅವರು ಮಂಡಿಸಿದ ರಾಜ್ಯ ಮುಂಗಡಪತ್ರದಲ್ಲಿ ರಾಜ್ಯದ ಸರ್ವತೋಮುಖ ಅಭಿವೃದ್ಧಿಗಾಗಿ ಕೆಲ ವಿಶೇಷ ಕ್ರಮ ಕೈಗೊಳ್ಳಲಾಗಿದೆ. ವಿವಿಧ ಇಲಾಖೆಗಳ ಸಮನ್ವಯ ಸಾಧಿಸಲು ಇಲಾಖಾವಾರು ಬದಲು ಆರು ವಲಯಗಳಾಗಿ ವಿಂಗಡಿಸಿ ಆಯವ್ಯಯ ಮಂಡನೆ ಮಾಡಲಾಗಿದೆ. ಅದರಲ್ಲಿ ಒಂದು ವಲಯದಲ್ಲಿ ಕೃಷಿ ಮತ್ತು ಪೂರಕ ಚಟುವಟಿಕೆಗಳು ಒಳಗೊಂಡಿವೆ.
ಕೃಷಿ ಮತ್ತು ಪೂರಕ ಚಟುವಟಿಕೆಗಳ ಮುಖ್ಯಾಂಶಗಳು:
* ನೀರಿನ ಭದ್ರತೆ, ಭೂ ಸಂಚಯ ಮತ್ತು ಸಾಮೂಹಿಕ ಕೃಷಿ, ಕೃಷಿ ಉತ್ಪನ್ನಗಳ ಸಂಸ್ಕರಣೆ, ಮಾರುಕಟ್ಟೆಗೆ ಉತ್ತೇಜನ ನೀಡಲು ಮತ್ತು ಕೃಷಿ ಹಾಗೂ ತೋಟಗಾರಿಕೆಯನ್ನು ಉದ್ದಿಮೆಯಾಗಿ ಪರಿಗಣಿಸಲು ಹೊಸ ಕೃಷಿ ನೀತಿ ಅನುಷ್ಠಾನ.
* ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಫಲಾನುಭವಿಗಳಿಗೆ ರಾಜ್ಯ ಸರ್ಕಾರ 4000 ರೂ. ಹೆಚ್ಚುವರಿ ನೆರವು ನೀಡುವ ಯೋಜನೆಯನ್ನು ಮುಂದುವರೆಸಲು 2600 ಕೋಟಿ ರೂ. ಅನುದಾನ.
* ಎಲ್ಲಾ ರೈತರಿಗೆ ಹಾಗೂ ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯ.
* ಪ್ರಧಾನಮಂತ್ರಿ ಬೆಳೆ ವಿಮೆ ಯೋಜನೆಯ ರಾಜ್ಯದ ಇನ್ಷೂರೆನ್ಸ್ ಕಂತಿನ ಪಾಲು ಬಿಡುಗಡೆಗೆ 900 ಕೋಟಿ ರೂ.
* ರೈತ ಸಿರಿ ಯೋಜನೆಯಡಿ ಟೆಫ್, ಚಿಯಾ ಮತ್ತು ಕ್ವಿನೋವಾ ಸಿರಿಧಾನ್ಯಗಳ ಸೇರ್ಪಡೆ.* ಮಣ್ಣು, ನೀರು ಪರೀಕ್ಷೆ ಮತ್ತು ರೈತರಿಗೆ ತಾಂತ್ರಿಕ ನೆರವು ನೀಡಲು ಸಂಚಾರಿ ಕೃಷಿ ಹೆಲ್ತ್ ಕ್ಲಿನಿಕ್ ಪ್ರಾರಂಭ.
* ಸಾವಯವ ಕೃಷಿ ಪ್ರೋತ್ಸಾಹಕ್ಕೆ 200 ಕೋಟಿ ರೂ. ಅನುದಾನ.
* ರೈತರಿಗೆ ಪ್ರದೇಶವಾರು ಸೂಕ್ತ ಬೆಳೆಯನ್ನು ಬೆಳೆಯಲು, ಅಗತ್ಯ ಬೀಜಗಳು, ರಸಗೊಬ್ಬರಗಳು, ಸಣ್ಣ ಪೌಷ್ಟಿಕಾಂಶಗಳ ಬಳಕೆಗೆ ಮಾರ್ಗದರ್ಶನ ನೀಡಲು ಹೊಸ ನೀತಿ ರಚನೆ.
* ರೈತರ ಸಾಮಥ್ರ್ಯ ಅಭಿವೃದ್ಧಿ ಮತ್ತು ಅರಿವು ಮೂಡಿಸುವ ಕಾರ್ಯಕ್ರಮಗಳಿಗಾಗಿ 40 ಪ್ರಾತ್ಯಕ್ಷಿಕೆ ಕ್ಷೇತ್ರಗಳ ಅಭಿವೃದ್ಧಿ.
* ಕೃಷಿ ಮಹಾಮಂಡಳಗಳು, ರಫ್ತುದಾರರು, ಆಹಾರ ಸಂಸ್ಕರಣಾ ಸಂಸ್ಥೆಗಳು ಮತ್ತು ಆಹಾರ ಸಂಸ್ಕರಣಾ ಉದ್ದಿಮೆದಾರರಿಗೆ ಆಹಾರ ಮತ್ತು ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ, ಸಂಸ್ಕರಣೆ, ದಾಸ್ತಾನು ಮತ್ತು ಪ್ಯಾಕೇಜಿಂಗ್‍ಗಳ ಬಗ್ಗೆ ಹೊಸ ತಂತ್ರಜ್ಞಾನಗಳನ್ನು ಪರಿಚಯಿಸಲು ಕ್ರಮ.
* ವಿಶ್ವಬ್ಯಾಂಕ್ ಪ್ರಾಯೋಜಿತ ಸುಜಲಾ-III ಯೋಜನೆಯನ್ನು ಜಾರಿಗೊಳಿಸಿರುವ 12 ಮಳೆ ಆಶ್ರಿತ ಜಿಲ್ಲೆಗಳ 2500 ಗ್ರಾಮಗಳ ಒಂದು ಲಕ್ಷಕ್ಕೂ ಹೆಚ್ಚು ರೈತರಿಗೆ ಭೂ ಸಂಪನ್ಮೂಲ ಯಾದಿಯ ತರಬೇತಿ ನೀಡಿ, ಕಾರ್ಡ್ ವಿತರಿಸಲು 10 ಕೋಟಿ ರೂ. ಅನುದಾನ.
* ವಿಶ್ವಬ್ಯಾಂಕ್ ಅನುದಾನಿತ ಹೊಸ ಬಹು-ರಾಜ್ಯ ಜಲಾನಯನ ಅಭಿವೃದ್ಧಿ ಯೋಜನೆಯಲ್ಲಿ (REWARD) ಮುಂದಿನ ಆರು ವರ್ಷದ ಅವಧಿಗೆ ಕರ್ನಾಟಕ ರಾಜ್ಯ ಭಾಗಿ.
* ಅಂತರ್ಜಲ ಸ್ಥಿತಿ ಗಂಭೀರವಾಗಿರುವ 76 ತಾಲ್ಲೂಕುಗಳಲ್ಲಿ ಮುಂದಿನ ಮೂರು ವರ್ಷದಲ್ಲಿ ನಾಲ್ಕು ಲಕ್ಷ ಹೆಕ್ಟೇರ್‍ನಲ್ಲಿ 810 ಅತಿ ಸಣ್ಣ ಜಲಾನಯನಗಳಲ್ಲಿ ಜಲಾಮೃತ ಯೋಜನೆ ಅನುಷ್ಠಾನ.
* ಸಾಗರದ ಇರುವಕ್ಕಿ ಗ್ರಾಮದಲ್ಲಿ ಶಿವಮೊಗ್ಗದ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾನಿಲಯದ ಬಾಕಿ ಕಾಮಗಾರಿ ಪೂರ್ಣಗೊಳಿಸಿ, ತರಗತಿ ಪ್ರಾರಂಭಿಸಲು ಕ್ರಮ.
* ತೋಟಗಾರಿಕೆ ಉತ್ಪನ್ನಗಳ ಸಮರ್ಪಕ ಕೊಯ್ಲೋತ್ತರ ನಿರ್ವಹಣೆಗೆ ವಿವಿಧ ಜಿಲ್ಲೆಗಳ 10 ಕೃಷಿ ಉತ್ಪನ್ನ ಮಾರುಕಟ್ಟೆಗಳಲ್ಲಿ 75 ಕೋಟಿ ರೂ. ವೆಚ್ಚದಲ್ಲಿ ಪಿಪಿಪಿ ಮಾದರಿಯಲ್ಲಿ 5000 ಮೆಟ್ರಿಕ್ ಟನ್ ಸಾಮಥ್ರ್ಯದ ಶೀತಲ ಗೃಹಗಳ ನಿರ್ಮಾಣ.
* ಹೊಸದಾಗಿ ತೋಟಗಾರಿಕೆ ಕೃಷಿ ಪದ್ಧತಿಗೆ ವರ್ಗಾವಣೆಗೊಳ್ಳುವ ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಪ್ರತಿ ಹೆಕ್ಟೇರಿಗೆ 5000 ರೂ.ಗಳಂತೆ ಗರಿಷ್ಠ 10,000 ರೂ. ನೆರವು.
* ಹಾಪ್‍ಕಾಮ್ಸ್ ಸಂಸ್ಥೆಯನ್ನು ಬಲಪಡಿಸಲು ಕ್ರಮ.
* ಕೊಳೆತು ಹೋಗಬಹುದಾದ ಹೂವು, ಹಣ್ಣು ತರಕಾರಿಗಳನ್ನು ಬೆಂಗಳೂರಿನಿಂದ ದೆಹಲಿ, ಮುಂಬಯಿ ಹಾಗೂ ತಿರುವನಂತಪುರಕ್ಕೆ ಸಾಗಿಸಲು ಕೇಂದ್ರ ಸರ್ಕಾರದ ಕೃಷಿ ರೈಲ್ ಯೋಜನೆಯ ಸೌಲಭ್ಯದ ಬಳಕೆ.
* ಸೂಕ್ಷ್ಮ ನೀರಾವರಿಗೆ 627 ಕೋಟಿ ರೂ. ಅನುದಾನ.
* ರಾಜ್ಯದ ಪ್ರತಿ ಗ್ರಾಮದಲ್ಲಿ ಜಲಗ್ರಾಮ ಕ್ಯಾಲೆಂಡರ್ ಸಿದ್ಧಪಡಿಸಲು ಕ್ರಮ.
* ಕರಾವಳಿ ಪ್ರದೇಶದಲ್ಲಿ ಪಶ್ಚಿಮ ಘಟ್ಟದ ನದಿಗಳಿಗೆ ಅಡ್ಡಲಾಗಿ “ಕಿಂಡಿ ಅಣೆಕಟ್ಟು ಯೋಜನೆ”ಗಳ (Vented Dams) ವ್ಯಾಪಕ ಅನುಷ್ಠಾನಕ್ಕೆ ಮಾಸ್ಟರ್ ಪ್ಲಾನ್.
* ಅಟಲ್ ಭೂ-ಜಲ ಯೋಜನೆಯಡಿ 1202 ಕೋಟಿ ರೂ.ಗಳನ್ನು ಬಳಸಿಕೊಂಡು ರಾಜ್ಯದ ಆಯ್ದ ಜಿಲ್ಲೆಗಳ ಅಂತರ್ಜಲ ಮಟ್ಟ ಹೆಚ್ಚಿಸಲು ಕ್ರಮ.
* ರಾಜ್ಯದ ಬೃಹತ್ ನೀರಾವರಿ ಯೋಜನೆಯಡಿಯಲ್ಲಿನ ಅಚ್ಚುಕಟ್ಟು ಪ್ರದೇಶಗಳಲ್ಲಿ Flood Irrigation ಪದ್ಧತಿಯನ್ನು ಇಸ್ರೇಲ್ ಮಾದರಿಯಲ್ಲಿ ಸೂಕ್ಷ್ಮ ನೀರಾವರಿಗೆ ಪರಿವರ್ತಿಸಲು ಕ್ರಮ.
* ಜಲಸಂಪನ್ಮೂಲ ಇಲಾಖೆಯ ಮೂಲಕ ಒಂದು ಲಕ್ಷ ಎಕರೆ ಜಮೀನಿಗೆ ನೀರಾವರಿ ಸೌಲಭ್ಯ.
* ಮಹದಾಯಿ ಯೋಜನೆಯಡಿ ಕಳಸಾ ಮತ್ತು ಬಂಡೂರಿ ನಾಲಾ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು 500 ಕೋಟಿ ರೂ. ಅನುದಾನ.
* ಎತ್ತಿನಹೊಳೆ ಯೋಜನೆಗೆ 1500 ಕೋಟಿ ರೂ. ಅನುದಾನ; ಮೊದಲನೆಯ ಹಂತದ Lift component ಕಾಮಗಾರಿಗಳನ್ನು ಪೂರ್ಣಗೊಳಿಸಿ ಮುಂದಿನ ಮುಂಗಾರು ಹಂಗಾಮಿನಲ್ಲಿ ಪ್ರಾಯೋಗಿಕವಾಗಿ ಚಾಲನೆಗೊಳಿಸಲು ಕ್ರಮ.
* ಹೂಳು ತುಂಬಿರುವ ತುಂಗಭದ್ರಾ ಜಲಾಶಯದ ನೀರಿನ ಸಂಗ್ರಹಣಾ ಸಾಮಥ್ರ್ಯದ ಕೊರತೆಯನ್ನು ನೀಗಿಸಲು ಪರ್ಯಾಯ ಹರಿವು ನಾಲೆ ಮೂಲಕ ನವಲೆ ಹತ್ತಿರ ಸಮತೋಲನಾ ಜಲಾಶಯ ನಿರ್ಮಾಣದ ವಿಸ್ತøತ ಯೋಜನಾ ವರದಿ ತಯಾರಿಕೆಗೆ 20 ಕೋಟಿ ರೂ. ಅನುದಾನ
* ರಾಜ್ಯದಲ್ಲಿ 5000 ಕೋಟಿ ರೂ.ಗಳ ವೆಚ್ಚದಲ್ಲಿ ಹೊಸ ಏತ ನೀರಾವರಿ ಯೋಜನೆಗಳ ಅನುಷ್ಠಾನ
* ರಾಯಚೂರು, ಯಾದಗಿರಿ, ಕಲಬುರಗಿ ಜಿಲ್ಲೆಗೆ ಕುಡಿಯುವ ನೀರು ಪೂರೈಕೆಗೆ ತಿಂತಿಣಿ ಬ್ರಿಡ್ಜ್ ಬಳಿ ಕೃಷ್ಣಾ ನದಿಗೆ ಜಲಾಶಯ ನಿರ್ಮಾಣ- ವಿಸ್ತøತ ಯೋಜನಾ ವರದಿ ತಯಾರಿಕೆಗೆ ಕ್ರಮ.
* ರಾಮನಗರ ಜಿಲ್ಲೆಯ ಕಣ್ವ ಫಾರ್ಮ್‍ನಲ್ಲಿ ಸಾರ್ವಜನಿಕ–ಖಾಸಗಿ ಸಹಭಾಗಿತ್ವದಲ್ಲಿ ರೇಷ್ಮೆ ಹುಳು ಸಂಸ್ಕರಣಾ ಘಟಕ ಸ್ಥಾಪನೆಗೆ ಕ್ರಮ.
* ರಾಜ್ಯದಲ್ಲಿ ಪಶುಸಂಗೋಪನಾ ಆರ್ಥಿಕ ಚಟುವಟಿಕೆಗಳ ವಿಸ್ತರಣೆಗೆ ಸಮೀಕ್ಷೆ ನಡೆಸಿ, ಸಮಗ್ರ ನೀತಿ ರಚನೆ.
* ವಿದೇಶಿ ತಳಿಯ ಹಂದಿಗಳನ್ನು ಆಮದು ಮಾಡಿಕೊಳ್ಳುವ “ಸಮಗ್ರ ವರಾಹ ಅಭಿವೃದ್ಧಿ” ಯೋಜನೆಗೆ ಐದು ಕೋಟಿ ರೂ. ಅನುದಾನ.
* ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಕುಕ್ಕುಟ ತ್ಯಾಜ್ಯ ಸಂಸ್ಕರಣೆ ಮತ್ತು ಮೌಲ್ಯವರ್ಧನ ಕೇಂದ್ರ ಸ್ಥಾಪನೆ.
* ಲಿಂಗ ನಿರ್ಧಾರಿತ ವೀರ್ಯನಳಿಕೆಗಳಿಂದ ಕೃತಕ ಗರ್ಭಧಾರಣೆ ಮೂಲಕ ಹೆಣ್ಣು ಕರುಗಳ ಜನನ ಹೆಚ್ಚಿಸಲು ಎರಡು ಕೋಟಿ ರೂ. ಅನುದಾನ.
* ಆಧುನಿಕ ಮೀನುಗಾರಿಕೆ ತಾಂತ್ರಿಕತೆ ಅಳವಡಿಕೆಯ ಉತ್ತೇಜನಕ್ಕೆ 1.5 ಕೋಟಿ ರೂ. ವೆಚ್ಚದಲ್ಲಿ “ಕರ್ನಾಟಕ ಮತ್ಸ್ಯ ವಿಕಾಸ ಯೋಜನೆ” ಜಾರಿ.
* ಮಹಿಳಾ ಮೀನುಗಾರರ ಸಬಲೀಕರಣ ಯೋಜನೆಯಡಿ 1000 ಮೀನುಗಾರ ಮಹಿಳೆಯರಿಗೆ ದ್ವಿಚಕ್ರ ವಾಹನಗಳನ್ನು ನೀಡಲು ಐದು ಕೋಟಿ ರೂ. ಅನುದಾನ.
* ಮುಲ್ಕಿಯಲ್ಲಿ ಎರಡು ಕೋಟಿ ರೂ. ವೆಚ್ಚದಲ್ಲಿ ಹಿನ್ನೀರು ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆ.
* ಮಂಗಳೂರು ತಾಲ್ಲೂಕು ಕುಳಾಯಿಯಲ್ಲಿ ನಿರ್ಮಿಸಲಾಗುತ್ತಿರುವ ಹೊಸ ಮೀನುಗಾರಿಕೆ ಬಂದರಿನಲ್ಲಿ 12.5 ಕೋಟಿ ರೂ. ವೆಚ್ಚದಲ್ಲಿ ಆಧುನಿಕ ಕರಾವಳಿ ಮೀನು ರಫ್ತು ಸ್ಥಾವರ ಸ್ಥಾಪನೆ.
* ಉಡುಪಿ ಜಿಲ್ಲೆಯ ಹೆಜಮಾಡಿಕೋಡಿಯಲ್ಲ್ಲಿ ಪರಿಷ್ಕøತ ಅಂದಾಜು ವೆಚ್ಚ 181 ಕೋಟಿ ರೂ.ಗಳಲ್ಲಿ ಮೀನುಗಾರಿಕೆ ಬಂದರು ನಿರ್ಮಾಣ.
* ಉಡುಪಿ ಜಿಲ್ಲೆಯ ಹಂಗಾರಕಟ್ಟೆ ಬಂದರು ಅಭಿವೃದ್ಧಿಗೆ 130 ಕೋಟಿ ರೂ.
* ಉತ್ತರ ಕನ್ನಡ ಜಿಲ್ಲೆಯ ಕಾರವಾರ ಮೀನುಗಾರಿಕಾ ಬಂದರಿನ ಅಭಿವೃದ್ಧಿ ಹಾಗೂ ಮೂಲಭೂತ ಸೌಕರ್ಯಕ್ಕಾಗಿ ನಾಲ್ಕು ಕೋಟಿ ರೂ.
* ಉತ್ತರ ಕನ್ನಡ ಜಿಲ್ಲೆಯ ತೆಂಗಿನಗುಂಡಿ ಬಂದರಿನ ಅಳಿವೆ ಹೂಳೆತ್ತುವ ಕಾಮಗಾರಿಗೆ ಐದು ಕೋಟಿ ರೂ.
* ಉಡುಪಿ ಜಿಲ್ಲೆ ಬೈಂದೂರು ತಾಲ್ಲೂಕಿನ ಮರವಂತೆಯ ಹೊರ ಬಂದರಿನ ಎರಡನೇ ಹಂತದ ಕಾಮಗಾರಿ ಪೂರ್ಣಗೊಳಿಸಲು 85 ಕೋಟಿ ರೂ. ಅನುದಾನ.
* ಕೊಡೇರಿ ಮೀನುಗಾರಿಕೆ ಬಂದರಿನ ಅಭಿವೃದ್ಧಿ ಕಾಮಗಾರಿಗಳಿಗೆ ಎರಡು ಕೋಟಿ ರೂ. ಅನುದಾನ.
* ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (DCC), ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (PCARD) ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (PACS) ಗಳಿಂದ ನೀಡಿರುವ ಮಧ್ಯಮಾವಧಿ ಹಾಗೂ ದೀರ್ಘಾವಧಿ ಕೃಷಿ ಸುಸ್ತಿ ಸಾಲಗಳ ಮೇಲಿನ ಬಡ್ಡಿ ಮನ್ನಾ. 466 ಕೋಟಿ ರೂ. ನೆರವು. 92 ಸಾವಿರ ರೈತರಿಗೆ ಪ್ರಯೋಜನ.
* ಅಡಿಕೆ ಬೆಳೆಗಾರರ ಪ್ರಾಥಮಿಕ/ ಮಾರುಕಟ್ಟೆ ಸಹಕಾರ ಸಂಘಗಳಲ್ಲಿ ಪ್ರತಿ ರೈತ ಕುಟುಂಬಕ್ಕೆ ನೀಡುವ ದೀರ್ಘಾವಧಿ ಕೃಷಿ ಸಾಲದ ಪೈಕಿ ಗರಿಷ್ಠ ಎರಡು ಲಕ್ಷ ರೂ. ವರೆಗಿನ ಸಾಲಕ್ಕೆ ಶೇ.5 ರಷ್ಟು ಬಡ್ಡಿ ವಿನಾಯಿತಿ
* ಕೃಷಿ ಮೌಲ್ಯ ಸರಪಳಿಯ ಅಭಿವೃದ್ಧಿಗಾಗಿ 100 FPO ರಚನೆ, FPO ಗಳ ಮೂಲಕ ಮೌಲ್ಯ ಸರಪಳಿ ಅಭಿವೃದ್ಧಿಗೆ ಎಂಟು ಕೋಟಿ ರೂ. ನೆರವು.
* ಕೃಷಿ ಉತ್ಪನ್ನಗಳ ಬೆಂಬಲ ಬೆಲೆ ಖರೀದಿಗಾಗಿ ಸ್ಥಾಪಿಸಲಾಗಿರುವ ಕನಿಷ್ಠ ಬೆಂಬಲ ಬೆಲೆ ಆವರ್ತ ನಿಧಿಯ ಮೊತ್ತ ಅಗತ್ಯಕ್ಕೆ ಅನುಗುಣವಾಗಿ 2000 ಕೋಟಿ ರೂ. ವರೆಗೆ ಹೆಚ್ಚಳ.
* ಕೃಷಿ ಮತ್ತು ಪೂರಕ ಚಟುವಟಿಕೆಗಳ ವಲಯಕ್ಕೆ ಒಟ್ಟಾರೆ 32,259 ಕೋಟಿ ರೂ. ಅನುದಾನ.
Comments are closed.