ಕರ್ನಾಟಕ

ಕೊರೊನಾ: ಪೂರ್ವ ಪ್ರಾಥಮಿಕ ಶಾಲೆಗಳಿಗೆ ರಜಾ ಘೋಷಿಸಿದ ರಾಜ್ಯ ಸರ್ಕಾರ

Pinterest LinkedIn Tumblr


ಬೆಂಗಳೂರು: ಕೊರೊನಾ ಭೀತಿ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ ಹಾಗೂ ಬೆಂಗಳೂರು ಗ್ರಾಮಾಂತರ ಭಾಗದ ನರ್ಸರಿ, ಎಲ್ ಕೆ ಜಿ ಮತ್ತು ಯುಕೆಜಿ ತರಗತಿಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ರಜಾ ಘೋಷಿಸಿ ಅದೇಶ ಹೊರಡಿಸಿದೆ.

ಕೊರೊನಾ ಭೀತಿ ಹಿನ್ನೆಲೆಯಲ್ಲಿ ಈ ಮೂರು ಶೈಕ್ಷಣಿಕ ಜಿಲ್ಲೆಗಳ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ನರ್ಸರಿ, ಎಲ್ ಕೆಜಿ ಮತ್ತು ಯುಕೆಜಿಗೆ ಸರ್ಕಾರದ ಮುಂದಿನ ಆದೇಶದ ವರೆಗೂ ರಜಾ ಘೋಷಿಸಲಾಗಿದೆ. ಮುಂಜಾಗೃತ ಕ್ರಮವಾಗಿ ಈ ಆದೇಶ ಹೊರಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Comments are closed.