ಕರ್ನಾಟಕ

ರಾಜ್ಯದಲ್ಲಿ ಮತ್ತೆರಡು ಕೊರೋನಾ ಪ್ರಕರಣ ದೃಢ: ಸೋಂಕಿತರ ಸಂಖ್ಯೆ 18ಕ್ಕೇರಿಕೆ

Pinterest LinkedIn Tumblr


ಬೆಂಗಳೂರು: ಕೋವಿಡ್-19 ಸೋಂಕಿತರ ಪ್ರಕರಣಗಳು ರಾಜ್ಯದಲ್ಲಿ ಮತ್ತಷ್ಟು ಹೆಚ್ಚುತ್ತಿದ್ದು, ಒಟ್ಟು ಸೋಂಕಿತ ಸಂಖ್ಯೆ 18ಕ್ಕೇರಿದೆ.

ಶನಿವಾರ ಒಂದೇ ದಿನ ರಾಜ್ಯದಲ್ಲಿ ಮೂರು ಜನರಿಗೆ ಕೋವಿಡ್-19 ಸೋಂಕು ಇರುವುದು ದೃಢವಾಗಿದೆ ಎಂದು ಆರೊಗ್ಯ ಇಲಾಖೆ ಮಾಹಿತಿ ನೀಡಿದೆ.

ಒಟ್ಟಾರೆಯಾಗಿ ರಾಜ್ಯದಲ್ಲಿ 18 ಮಂದಿಗೆ ಸೋಂಕು ದೃಢವಾಗಿದ್ದು, ಇವರಲ್ಲಿ ಓರ್ವ ಸಾವನ್ನಪ್ಪಿದ್ದರೆ ಮತ್ತೋರ್ವರು ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ.

ಕೋವಿಡ್-19 ರೋಗ ಪೀಡಿತರಿಗೆ, ಮನೆ ಮತ್ತು ಆಸ್ಪತ್ರೆಗಳಲ್ಲಿ ಕ್ವಾರಂಟೈನ್ ನಲ್ಲಿರುವ ವ್ಯಕ್ತಿಗಳಿಗೆ ಮಾನಸಿಕ ಆರೋಗ್ಯ ಸಮಾಲೋಚನೆ ನಡೆಸಲಾಗುತ್ತಿದೆ. ಇದುವರೆಗೆ 4390 ಕೌನ್ಸಲಿಂಗ್ ಮಾಡಲಾಗಿದೆ ಎಂದು ಆರೋಗ್ಯ ಇಲಾಖೆ ತನ್ನ ಸುತ್ತೋಲೆಯಲ್ಲಿ ತಿಳಿಸಿದೆ.

ಮೆಕ್ಕಾ ಪ್ರವಾಸದಿಂದ ಆಗಮಿಸಿದ್ದ ಚಿಕ್ಕಬಳ್ಳಾಪುರ ಗೌರಿಬಿದನೂರಿನ ವ್ಯಕ್ತಿಗೆ ಕೋವಿಡ್-19 ಸೋಂಕು ತಗುಲಿರುವುದು ಖಚಿತವಾಗಿದ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಇಂದು ಮುಂಜಾನೆ ಟ್ವೀಟ್ ಮಾಡಿದ್ದರು. ಉಳಿದ ಇಬ್ಬರು ಸೋಂಕಿತರ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

Comments are closed.