ಬೆಂಗಳೂರು: ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಕರ್ನಾಟಕದ 6 ಜಿಲ್ಲೆಗಳು ಸೇರಿ ದೇಶದ 75 ಜಿಲ್ಲೆಗಳು ಮಾರ್ಚ್ 31ರವರೆಗೆ ಸಂಪೂರ್ಣ ಬಂದ್ ಮಾಡಲು ಆದೇಶ ಹೊರಡಿಸಲಾಗಿದೆ.
ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ರಾಜಧಾನಿ ಬೆಂಗಳೂರು ಸೇರಿ ಬೆಂಗಳೂರು ಗ್ರಾಮಾಂತರ , ಮೈಸೂರು, ಕಲಬುರಗಿ, ಚಿಕ್ಕಬಳ್ಳಾಪುರ, ಧಾರವಾಡ, ಮಂಗಳೂರು, ಬೆಳಗಾವಿ, ಕೊಡಗು ಜಿಲ್ಲೆಗಳು ಸಂಪೂರ್ಣ ಲಾಕ್‌ಡೌನ್ ಆಗಲಿವೆ. ಈ ಬಗ್ಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.
ಕೋವಿಡ್-19 ಪ್ರಕರಣ ಕಂಡುಬಂದಿರುವ ಈ 9 ಜಿಲ್ಲೆಗಳಲ್ಲಿ ವೈದ್ಯಕೀಯ, ಔಷದಿ, ದಿನಸಿ, ಕೃಷಿ ಮೊದಲಾದ ಅಗತ್ಯ ಸೇವೆ ಹೊರತುಪಡಿಸಿ ಉಳಿದ ಇತರೆ ವಾಣಿಜ್ಯ ಚಟುವಟಿಕೆಗಳಿಗೆ ಮಾರ್ಚ್ 31ರವರೆಗೆ ನಿರ್ಬಂಧ ಹೇರಲಾಗಿದೆ.
Comments are closed.