ಕರ್ನಾಟಕ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ರದ್ದಾಗಿದೆ ಎಂಬ ಒಂದು ಅಪ್ಪಟ ಸುಳ್ಳು ಸುದ್ದಿ, ಮುಂದೂಡಲಾಗಿದೆಯಷ್ಟೇ: ಸುರೇಶ್ ಕುಮಾರ್

Pinterest LinkedIn Tumblr

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ ರದ್ದಾಗಿಲ್ಲ, ಮುಂದೂಡಲಾಗಿದೆಯಷ್ಟೇ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.

ಈ ಕುರಿತಂತೆ ಟ್ವೀಟ್ ಮಾಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು, ‘ಕೆಲ ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ರದ್ದಾಗಿದೆ ಎಂಬ ಒಂದು ಅಪ್ಪಟ ಸುಳ್ಳು ಸುದ್ದಿ ಹರಿದಾಡುತ್ತಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ ರದ್ದು ಮಾಡುವ ಕುರಿತು ಯಾವುದೇ ನಿರ್ಧಾರ ಕೈಗೊಂಡಿಲ್ಲ. ಪರೀಕ್ಷೆಗಳ ಕುರಿತು ಚರ್ಚಿಸಲು ಯಾವುದೇ ಸಭೆಯೂ ಆಗಿಲ್ಲ ಸ್ಪಷ್ಟಪಡಿಸಿದ್ದಾರೆ.

ಕೊರೋನಾ ಸೋಂಕು ಹರಡುವ ಭೀತಿಯಿಂದ ಈಗಾಗಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸೇರಿದಂತೆ ಎಲ್ಲಾ ಪರೀಕ್ಷೆಗಳನ್ನು ರಾಜ್ಯ ಸರ್ಕಾರ ಮುಂದೂಡಿದೆ. ಮುಂದಿನ ದಿನಾಂಕವನ್ನು ಇನ್ನೂ ಪ್ರಕಟಿಸಿಲ್ಲ. ಈ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Comments are closed.