ಕರ್ನಾಟಕ

ಕೊರೋನಾ ವೈರಸ್: ಶಿಕ್ಷಕರ ಅರ್ಹತಾ ಪರೀಕ್ಷೆ ಮುಂದೂಡಿಕೆ

Pinterest LinkedIn Tumblr


ಬೆಂಗಳೂರು: ಕೋವಿಡ್-19 ಭೀತಿ ಹಿನ್ನೆಲೆಯಲ್ಲಿ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಕೇಂದ್ರೀಕೃತ ದಾಖಲಾತಿ ಘಟಕ ಮುಂದೂಡಿ ಆದೇಶ ಹೊರಡಿಸಿದೆ.

2019ನೇ ಸಾಲಿನ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ಏಪ್ರಿಲ್ 11ರಂದು ನಡೆಸಲು ನಿಗದಿಪಡಿಸಲಾಗಿತ್ತು. ಕೋವಿಡ್-19 ವೈರಸ್ ವ್ಯಾಪಕವಾಗಿ ಹರಡುತ್ತಿರುವ ಕಾರಣದಿಂದ ಪ್ರಧಾನಮಂತ್ರಿಗಳು ದೇಶದಾದ್ಯಂತ 21 ದಿನ ಲಾಕ್ ಡೌನ್ ಘೋಷಣೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಏಪ್ರಿಲ್ 11ಕ್ಕೆ ನಿಗದಿಪಡಿಸಲಾಗಿದ್ದ ಶಿಕ್ಷಕರ ಅರ್ಹತಾ ಪರೀಕ್ಷೆ ಮುಂದೂಡಲಾಗಿದೆ.

ಪರೀಕ್ಷೆಯ ಮುಂದಿನ ದಿನಾಂಕವನ್ನು ಶೀಘ್ರದಲ್ಲೇ ತಿಳಿಸಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

Comments are closed.