ಬೆಂಗಳೂರು: ಕೊರೊನಾ ವೈರಸ್ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಲ್ಲಾ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಂಟ್ರೋಲ್ ರೂಂಗಳನ್ನು ಸ್ಥಾಪಿಸಿದ್ದು, ಅದು ನಿರಂತರವಾಗಿ ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸಲಿದೆ.
ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿ ಕೋವಿಡ್ 19 ಕಂಟ್ರೋಲ್ ರೂಮ್ ಗಳನ್ನು ತೆರೆಯಲಾಗಿದ್ದು ಅಲ್ಲಿನ ದೂರವಾಣಿ ಸಂಖ್ಯೆಗಳನ್ನು ನೀಡಲಾಗಿದೆ. ಸಾರ್ವಜನಿಕರು ಅಗತ್ಯವಿರುವವರು ಇವುಗಳನ್ನು ಬಳಸಿಕೊಳ್ಳಬಹುದು ಎಂದು ಆರೋಗ್ಯ ಸಚಿವ ಬಿ ಶ್ರೀರಾಮುಲು ಹೇಳಿದ್ದಾರೆ.
ಕೊರೋನಾ ಸೋಂಕು ಹರಡದಂತೆ ತಡೆಯುವ ನಿಟ್ಟಿನಲ್ಲಿ ಕೈಗೊಂಡ ಮುಂಜಾಗ್ರತಾ ಕ್ರಮಗಳ ಪರಿಶೀಲನೆ ನಡೆಸಲು ಇಂದು ಆರೋಗ್ಯ ಸಚಿವರು ಹೊಸಪೇಟೆ ಹಾಗೂ ಕೊಪ್ಪಳಕ್ಕೆ ಭೇಟಿ ನೀಡಲಿದ್ದಾರೆ.
Comments are closed.