ಬೆಂಗಳೂರು: ಕೋವಿಡ್-19 ಸೋಂಕು ಹರಡದಂತೆ ಕಾಲೇಜುಗಳಿಗೆ ಘೋಷಿಸಲಾಗಿರುವ ರಜೆಯನ್ನು ಮೇ 20ರವರೆಗೆ ಮುಂದುವರೆಸಲಾಗಿದೆ ಎಂಬ ಸುತ್ತೋಲೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ಸುದ್ದಿ ಸತ್ಯಕ್ಕೆ ದೂರವಾಗಿದ್ದು ಎಂದು ಕಾಲೇಜು ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ.
ಕಾಲೇಜು ಶಿಕ್ಷಣ ನಿರ್ದೇಶಕರ ಸುಳ್ಳು ಸಹಿಯೊಂದಿಗೆ ಎಪ್ರಿಲ್ 1ರಿಂದ ಮೇ 20ರವರೆಗೆ ಒಟ್ಟು 50 ದಿನಗಳ ರಜೆ ಘೋಷಣೆ ಮಾಡಲಾಗಿದೆ ಎಂದು ಸುಳ್ಳು ಸುತ್ತೋಲೆಯೊಂದು ಹರಿದಾಡುತ್ತಿದೆ. ಇಂತಹ ಯಾವುದೇ ಸುತ್ತೋಲೆಯನ್ನು ಇಲಾಖೆ ಹೊರಡಿಸಿಲ್ಲ ಎಂದು ಸ್ಪಷ್ಟಪಡಿಸಿದೆ.
ಕೋವಿಡ್-19 ಸೋಂಕಿನ ಕಾರಣದಿಂದ ದೇಶದ್ಯಾಂತ ಲಾಕ್ ಡೌನ್ ಹೇರಲಾಗಿದ್ದು, ಎಪ್ರಿಲ್ 14 ರವರೆಗೆ ಮುಂದುವರಿಯಲಿದೆ. ಅಲ್ಲಿಯವರೆಗೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
Comments are closed.