ಕರ್ನಾಟಕ

ಕರ್ನಾಟಕದಲ್ಲಿ ಮತ್ತೆ ಐದು ಹೊಸ ಕೋವಿಡ್-19 ಪಾಸಿಟಿವ್ ಪ್ರಕರಣ; ಸೋಂಕಿತರ ಸಂಖ್ಯೆ 395ಕ್ಕೆ ಏರಿಕೆ

Pinterest LinkedIn Tumblr

ಬೆಂಗಳೂರು: ಮಾರಕ ಕೊರೋನಾ ವೈರಸ್ ನಿಂದ ತತ್ತರಿಸುತ್ತಿರುವ ಕರ್ನಾಟಕದಲ್ಲಿ ಮತ್ತೆ ಐದು ಹೊಸ ಕೋವಿಡ್-19 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಆ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 395ಕ್ಕೆ ಏರಿಕೆಯಾಗಿದೆ.

ಸೂರ್ಯ ನಗರಿ ಕಲಬುರಗಿ ಜಿಲ್ಲೆಯಲ್ಲೇ ಇಂದು ಐದು ಹೊಸ ಕೊರೊನಾ ಸೋಂಕು ದೃಢಪಟ್ಟಿರುವುದಾಗಿ ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದ್ದು, ಇದೀಗ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ‌ 27 ಕ್ಕೆ ಏರಿಕೆ ಆಗಿದೆ. ದೇಶದಲ್ಲೇ ಮೊದಲ ಬಾರಿಗೆ ಕೊರೊನಾ ಸೋಂಕಿಗೆ ಕಲಬುರಗಿ ವೃದ್ಧ ಬಲಿಯಾಗಿದ್ದು, ಇದೀಗ ಜಿಲ್ಲೆಯಲ್ಲಿ ಮತ್ತೆ ಹೊಸ ಐದು ಪ್ರಕರಣಗಳು ಕಲಬುರಗಿಯಲ್ಲೇ ವರದಿ ಆಗಿರುವುದರಿಂದ ಮತ್ತಷ್ಟು ಆತಂಕ ಹೆಚ್ಚಿಸಿದೆ.

ಇಂದು ಪತ್ತೆಯಾದ ಸೋಂಕಿತರೆಲ್ಲರೂ ಕಲಬುರಗಿ ಜಿಲ್ಲೆಗೆ ಸೇರಿದವರಾಗಿದ್ದಾರೆ. ಐವರ ಪೈಕಿ ನಾಲ್ಕು ಮಂದಿ ಗಂಡಸರು ಮತ್ತು ಓರ್ವ ಮಹಿಳೆ ಇಂದು ಸೋಂಕಿಗೆ ತುತ್ತಾಗಿದ್ದಾರೆ. ಇಂದು ಪತ್ತೆಯಾಗಿರುವ ಸೋಂಕಿತರಲ್ಲಿ ಪೇಷೆಂಟ್ ನಂಬರ್ 391 ಪೇಷೆಂಟ್ ನಂಬರ್ (17 ವರ್ಷ) 175ರ ಸಂಪರ್ಕಕ್ಕೆ ಬಂದು ಕ್ವಾರಂಟೈನ್ ನಲ್ಲಿದ್ದರು. ಅಂತೆಯೇ ಪೇಷೆಂಟ್ ನಂಬರ್ 392, 393 ಮತ್ತು 395 (13 ವರ್ಷದ ಗಂಡು, 30 ವರ್ಷದ ಮಹಿಳೆ ಮತ್ತು 19 ವರ್ಷದ ಗಂಡು ) ಪೇಷೆಂಟ್ ನಂಬರ್ 205ರ ಸಂಪರ್ಕಕ್ಕೆ ಬಂದಿದ್ದರು. ಹೀಗಾಗಿ ಅವರನ್ನು ಕ್ವಾರಂಟೈನ್ ಮಾಡಲಾಗಿತ್ತು. ಇದೀಗ ಅವರಲ್ಲಿ ಕೊರೋನಾ ವೈರಸ್ ಸೋಂಕು ಕಂಡುಬಂದಿದೆ.

ಇನ್ನು ಪೇಷೆಂಟ್ ನಂಬರ್ 394 50 ವರ್ಷದ ಪುರುಷ ಸೋಂಕಿತರು ಪೇಷೆಂಟ್ ನಂಬರ್ 177ರ ಸಂಪರ್ಕಕ್ಕೆ ಬಂದು ಕ್ವಾರಂಟೈನ್ ಆಗಿದ್ದರು.

Comments are closed.