ಕರ್ನಾಟಕ

ರಾಜ್ಯದಲ್ಲಿ 18 ಕೊರೋನಾ ಪಾಸಿಟಿವ್​​ ಪ್ರಕರಣ ಪತ್ತೆ: ಸೊಂಕಿತರ ಸಂಖ್ಯೆ 408ಕ್ಕೇರಿಕೆ

Pinterest LinkedIn Tumblr


ಬೆಂಗಳೂರು(ಏ.20): ಕರ್ನಾಟಕದಲ್ಲಿ ಕೊರೋನಾ ವೈರಸ್​ ಆರ್ಭಟ ಮುಂದುವರಿದಿದೆ. ಇಂದು(ಸೋಮವಾರ) ಒಂದೇ ದಿನ 18 ಹೊಸ ಕೋವಿಡ್​​-19 ಪಾಸಿಟಿವ್​​ ಪ್ರಕರಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 408ಕ್ಕೇರಿದೆ. ಜತೆಗೆ ಇದುವರೆಗೂ 16 ಮಂದಿ ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ತಿಳಿಸಿದೆ.

ರಾಜ್ಯ ಸರ್ಕಾರದ ಪ್ರಕಾರ, ಬೆಂಗಳೂರು ನಗರ- 89, ಮೈಸೂರು- 84, ಬೆಳಗಾವಿ- 42, ಬಾಗಲಕೋಟೆ- 21, ಬಳ್ಳಾರಿ- 13, ಬೆಂಗಳೂರು ಗ್ರಾಮಾಂತರ- 12, ಬೀದರ್​​- 14, ಚಿಕ್ಕಬಳ್ಳಾಪುರ- 16, ದಕ್ಷಿಣ ಕನ್ನಡ- 14, ಚಿತ್ರದುರ್ಗ- 1, ದಾವಣಗೆರೆ- 2, ಧಾರವಾಡ- 7, ಗದಗ- 4, ಕಲಬುರ್ಗಿ- 27, ಕೊಡಗು- 1, ಮಂಡ್ಯ- 12, ತುಮಕೂರು- 2, ಉಡುಪಿ- 3, ಉತ್ತರ ಕನ್ನಡ- 11, ವಿಜಯಪುರ 32 ಮಂದಿಗೆ ಕೊರೋನಾ ಬಂದಿದೆ. ಈ ಪೈಕಿ 112 ಮಂದಿ ಸಂಪೂರ್ಣ ಗುಣಮುಖರಾಗಿದ್ದು, 280 ಕೇಸುಗಳು ಆ್ಯಕ್ಟೀವ್​​ ಆಗಿವೆ.

ಭಾರತದಲ್ಲಿ ಕೊರೋನಾ ವೈರಸ್​ ದಾಳಿಗೆ ಜನರು ತತ್ತರಿಸಿದ್ದಾರೆ. ದೇಶದ ಇದುವರೆಗಿನ ಸೋಂಕಿತರ ಪ್ರಮಾಣ ಹೆಚ್ಚಾಗಿರುವ ರಾಜ್ಯಗಳಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದೆ. ಮಹಾರಾಷ್ಟ್ರದಲ್ಲಿ ಕೊರೋನಾದಿಂದ 200ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ದೇಶದಲ್ಲಿ ಕೊರೋನಾ ಸೋಂಕಿತರ ಸಾವಿನ ಸಂಖ್ಯೆ 543ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಕೊರೋನಾದಿಂದಾಗಿ ಕಳೆದ 24 ಗಂಟೆಗಳಲ್ಲಿ ಒಟ್ಟು 36 ಜನರು ಸಾವನ್ನಪ್ಪಿದ್ದಾರೆ. ಕೊರೋನಾ ಸೋಂಕಿತರ ಸಂಖ್ಯೆ 17,265 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಅವರಲ್ಲಿ 2,546 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

Comments are closed.