ಕರ್ನಾಟಕ

ಮೇ.15ರ ವರೆಗೆ ಲಾಕ್‌ಡೌನ್ ಮುಂದುವರೆಸುವ ಸಾಧ್ಯತೆ?; ಯಡಿಯೂರಪ್ಪ ಸ್ಪಷ್ಟನೆ

Pinterest LinkedIn Tumblr


ಬೆಂಗಳೂರು (ಏಪ್ರಿಲ್ 27); ಕೊರೋನಾ ಸೋಂಕನ್ನು ತಡೆಯುವ ನಿಟ್ಟಿನಲ್ಲಿ ದೇಶದಾದ್ಯಂತ ಹೇರಲಾಗಿರುವ ಲಾಕ್‌ಡೌನ್ ಅನ್ನು ಮೇ.15ರ ವರೆಗೆ ಮುಂದುವರೆಸಬೇಕಾಗಬಹುದು ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಕೊರೋನಾ ನಿಯಂತ್ರಣ ಮತ್ತು ಲಾಕ್‌ಡೌನ್ ಅವಧಿಯನ್ನು ವಿಸ್ತರಿಸುವ ಕುರಿತು ಇಂದು ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಚರ್ಚೆ ನಡೆಸಿದ್ದರು. ಈ ಚರ್ಚೆಯಲ್ಲಿ ಕರ್ನಾಟಕದ ಸಿಎಂ ಯಡಿಯೂರ್‍ಪಪ ಸಹ ಭಾಗವಹಿಸಿದ್ದರು. ವಿಡಿಯೋ ಕಾನ್ಫರೆನ್ಸ್ ನಂತರ ಮಾಹಿತಿ ನೀಡಿರುವ ಬಿಎಸ್‌ವೈ,

“ಸೋಂಕು‌ ಹರಡದಂತೆ ಎಲ್ಲಾ ಕ್ರಮ ಕೈಗೊಂಡಿದ್ದೇವೆ. ಮುಂದೆಯೂ ಅದನ್ನು ಮುಂದುವರಿಸುತ್ತೇವೆ. ಹೀಗಾಗಿ ಮೇ.03ರ ನಂತರವೂ ಎರಡು ವಾರಗಳ ಕಾಲ ಲಾಕ್‌ಡೌನ್ ವಿಸ್ತರಣೆಯಾಗುವ ಸಾಧ್ಯತೆ ಇದೆ. ಮೇ.15ರ ವರೆಗೂ ಲಾಕ್‌ಡೌನ್ ಇರಲಿದೆ. ಇನ್ನೂ ವಲಯವಾರು ವಿನಾಯಿತಿ ಬೇಕು ಎಂಬ ರಾಜ್ಯ ಸರ್ಕಾರದ ಅಭಿಪ್ರಾಯಕ್ಕೆ ತಕ್ಷಣಕ್ಕೆ ಪ್ರಧಾನಿ ಕಡೆಯಿಂದ ಯಾವುದೇ ಉತ್ತರ ಇಲ್ಲ. ಆದರೆ, ಮೋದಿ ಅವರ ನಿರ್ಧಾರಕ್ಕೆ ನಮ್ಮ ಸಂಪೂರ್ಣ ಬೆಂಬಲ ಇದೆ” ಎಂದು ತಿಳಿಸಿದ್ದಾರೆ.

Comments are closed.