ಬೆಂಗಳೂರು: ಕಳೆದ 28 ದಿನಗಳಿಂದ ಕೊರೋನಾ ಪ್ರಕರಣಗಳು ಪತ್ತೆಯಾಗದ ಹಿನ್ನೆಲೆಯಲ್ಲಿ ದಾವಣಗೆರೆಯನ್ನು ಗ್ರೀನ್ ಜೋನ್ಗೆ ಸೇರಿಸಲಾಗಿತ್ತು. ಆದರೆ ಇಂದು ಹೊಸದಾಗಿ ಒಂದು ಪ್ರಕರಣ ಪತ್ತೆಯಾಗಿದ್ದು ಆತಂಕ ಸೃಷ್ಟಿಸಿದೆ.
ಇಂದು ರಾಜ್ಯದಲ್ಲಿ ಹೊಸದಾಗಿ 11 ಪ್ರಕರಣಗಳು ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 534ಕ್ಕೆ ಏರಿಕೆಯಾಗಿದೆ. ಬೆಳಗ್ಗೆ 9 ಮಂದಿ ಸೋಂಕಿಗೆ ದೃಢಪಟ್ಟಿದ್ದರು. ಇದೀಗ ಹೊಸದಾಗಿ 2 ಪ್ರಕರಣಗಳು ಮಾತ್ರ ಪತ್ತೆಯಾಗಿವೆ.
ಮೈಸೂರು, ಬೆಳಗಾವಿ ಮತ್ತು ದಾವಣಗೆರೆಯಲ್ಲಿ ಒಂದೊಂದು ಪ್ರಕರಣಗಳು ಪತ್ತೆಯಾಗಿವೆ. ಕಲಬುರಗಿಯಲ್ಲಿ 8 ಪ್ರಕರಣಗಳು ಪತ್ತೆಯಾಗಿವೆ.
ರಾಜ್ಯದಲ್ಲಿ ಒಟ್ಟಾರೆ 534 ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಈ ಪೈಕಿ 216 ಮಂದಿ ಗುಣಮುಖರಾಗಿದ್ದಾರೆ. ಇನ್ನು 297 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇಲ್ಲಿಯವರೆಗೂ 20 ಮಂದಿ ಮೃತಪಟ್ಟಿದ್ದಾರೆ.
ಕರ್ನಾಟಕದಲ್ಲಿ ಇದುವರೆಗೆ 534 #COVID19 ಪ್ರಕರಣಗಳು ಖಚಿತಗೊಂಡಿವೆ ಹಾಗೂ ಇವರಲ್ಲಿ 216 ಜನ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿರುತ್ತಾರೆ. #IndiaFightsCornona #ಮನೆಯಲ್ಲೇಇರಿ pic.twitter.com/XtD7lUGSJ5
— B Sriramulu (@sriramulubjp) April 29, 2020
Comments are closed.