ಬೆಂಗಳೂರು: ಬಾಗಲಕೋಟೆಯ ಬಾದಾಮಿಯಲ್ಲಿ ಒಂದೇ ದಿನ 12 ಪ್ರಕರಣಗಳು ಸೇರಿದಂತೆ ರಾಜ್ಯದಲ್ಲಿ ಇಂದು 19 ಕೊರೋನಾ ವೈರಸ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 692ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬುಧವಾರ ಮಾಹಿತಿ ನೀಡಿದೆ.
607ನೇ ರೋಗಿಯ ಸಂಪರ್ಕಕ್ಕೆ ಬಂದಿದ್ದ 10 ಹಾಗೂ 15 ವರ್ಷದ ಬಾಲಕ ಸೇರಿ 45, 26, 47, 23, 32, 30 ವರ್ಷದ ವ್ಯಕ್ತಿಗಳು, 18 ವರ್ಷದ ಯುವತಿ, 55 ವರ್ಷದ ವೃದ್ಧೆ, 30 ವರ್ಷದ ಮಹಿಳೆ, 40 ವರ್ಷದ ಮಹಿಳೆ,16 ವರ್ಷದ ಯುವತಿಯಲ್ಲಿ ಸೋಂಕು ದೃಢಪಟ್ಟಿದೆ.
ಇದರಿಂದ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 692ಕ್ಕೇರಿಕೆಯಾಗಿವೆ. ಒಟ್ಟು 30 ಮಂದಿ ಮೃತಪಟ್ಟಿದ್ದು, 345 ಜನರು ಚೇತರಿಕೆ ಕಂಡಿದ್ದಾರೆ.
Comments are closed.