ಮೈಸೂರು: ಹೊರ ದೇಶ-ಹೊರ ರಾಜ್ಯಗಳಿಂದ ಬರುವವರಿಗೆ ಕಡ್ಡಾಯವಾಗಿ 14 ದಿನಗಳು ಕ್ವಾರಂಟೈನ್ ಗೆ ಒಳಪಡಿಸಬೇಕು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಜಿಲ್ಲಾಧಿಕಾರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.
ವಿಶ್ವದಾದ್ಯಂತ ಆತಂಕ ಮೂಡಿಸಿರುವ ಕೊರೊನಾ ವೈರಸ್ ಮೈಸೂರು ಜಿಲ್ಲೆಯಲ್ಲಿ ಹರಡದಂತೆ ಕಟ್ಟುನಿಟ್ಟಿನ ಕ್ರಮಹಿಸಬೇಕಾಗಿದೆ. ಈಗಾಗಲೇ ಮೈಸೂರು ಜಿಲ್ಲೆಯಲ್ಲಿ ಕೊರೊನಾ ಸೋಂಕು ಹರಡುವುದನ್ನು ನಿಯಂತ್ರಣಕ್ಕೆ ತಂದಿರುವುದು ಸಂತಸದ ವಿಷಯ. ಇನ್ನು ಮುಂದೆ ಯಾರಿಗೂ ಸೋಂಕು ತಗುಲದಂತೆ ಮುಂಜಾಗ್ರತೆ ವಹಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ಹಲವಾರು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ.
ಮಹಿಳೆಯರು ಮತ್ತು ಮಕ್ಕಳ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಜೊತೆಗೆ ಅವರ ಸುರಕ್ಷತೆ ಬಗ್ಗೆ ಜಾಗ್ರತೆ ವಹಿಸಬೇಕು. ವಯೋವೃದ್ಧರಿದ್ದಲ್ಲಿ ಅವರನ್ನು ನೋಡಿಕೊಳ್ಳಲು ಪ್ರತ್ಯೇಕ ತಂಡ ರಚಿಸಿ, ವಿಶೇಷ ನಿಗಾವಹಿಸಬೇಕು. ಸಾರ್ವಜನಿಕರು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದನ್ನು ಖಾತರಿಸಿಕೊಳ್ಳಬೇಕು. ಜೊತೆಗೆ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಅವರು ಸೂಚಿಸಿದ್ದಾರೆ.
Comments are closed.