ಬೆಂಗಳೂರು: ಕೊರೊನಾ ಲಾಕ್ಡೌನ್ , ಸರ್ಕಾರದ ಕ್ರಮಗಳು, ಕಾರ್ಮಿಕರ ಸಮಸ್ಯೆ ಮುಂತಾದ ವಿಚಾರಗಳನ್ನು ಮುಂದಿಟ್ಟುಕೊಂಡು ಸರ್ಕಾರ ವಿರುದ್ಧ ಹೋರಾಟ ರೂಪಿಸಲು ಕಾಂಗ್ರೆಸ್ ಮುಂದಾಗಿದೆ. ಸೋಮವಾರ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಮುಖಂಡರ ಮಹತ್ವದ ಸಭೆ ನಡೆಸಿದ್ದು ಹಲವು ವಿಚಾರಗಖ ಕುರಿತಾಗಿ ಚರ್ಚೆ ನಡೆಸಲಾಯಿತು.
ಕೊರೊನಾ ಸಂದರ್ಭದಲ್ಲಿ ಕಾಂಗ್ರೆಸ್ ನಡೆ ಹೇಗಿರಬೇಕು, ಸಾರ್ವಜನಿಕವಾಗಿ ಏನೆಲ್ಲಾ ಕಾರ್ಯಕ್ರಮ ರೂಪಿಸಬೇಕು ಎಂಬುವುದರ ಕುರಿತಾಗಿ ಸಭೆಯಲ್ಲಿ ಮುಖಂಡರು ಚರ್ಚೆ ನಡೆಸಿದರು. ಈಗಾಗಲೇ ಕಾಂಗ್ರೆಸ್ ಟಾಸ್ಕ್ ಫೋರ್ಸ್ ರಚನೆ ಮಾಡಿದ್ದು ಕೊರೊನಾದಿಂದ ಸಂಕಷ್ಟಕ್ಕೆ ಒಳಗಾಗುತ್ತಿರುವ ಜನರ ಪರವಾಗಿ ಕೆಲಸ ಮಾಡುತ್ತಿದೆ.
ಅಲ್ಲದೆ ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ವೈಫಲ್ಯಗಳು, ರೈತರು, ಕಾರ್ಮಿಕರು, ದಿನಕೂಲಿ ನೌಕರರು ಮುಂತಾದ ಜನರ ಸಮಸ್ಯೆಗಳಿಗೆ ಸರ್ಕಾರ ಯಾವ ರೀತಿಯಲ್ಲಿ ಸ್ಪಂದಿಸುತ್ತಿದೆ ಎಂಬ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಿತು.
ಈಗಾಗಲೇ ಸರ್ಕಾರಕ್ಕೆ ಒತ್ತಡ ಹೇರುವ ಕೆಲಸವನ್ನು ಕಾಂಗ್ರೆಸ್ ನಡೆಸುತ್ತಿದ್ದು ಇದನ್ನು ಮುಂದಿನ ದಿನಗಳಲ್ಲಿ ತೀವ್ರಗೊಳಿಸಲು ನಾಯಕರು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಸರ್ಕಾರದ ತಪ್ಪುಗಳನ್ನು ಮುಂದಿಟ್ಟುಕೊಂಡ ಜನರ ಗಮನ ಸೆಳೆಯುವುದು ಹಾಗೂ ಕೈಗೊಳ್ಳಬೇಕಾಗಿರುವ ಕೆಲಸಗಳ ಕುರಿತಾಗಿ ಸರ್ಕಾರದ ಗಮನ ಸೆಳೆಯುವುದು. ಈ ಮೂಲಕ ಸರ್ಕಾರದ ವಿರುದ್ಧ ಜನಾಭಿಪ್ರಾಯ ಮೂಡಿಸಲು ಕಾಂಗ್ರೆಸ್ ನಿರ್ಧಾರ ತೆಗೆದುಕೊಂಡಿದೆ.
ಹಿರಿಯ ಮುಖಂಡರ ಸಭೆಯಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ಕೆ.ಎಚ್. ಮುನಿಯಪ್ಪ, ಡಾ. ಜಿ. ಪರಮೇಶ್ವರ್, ಟಿ.ಬಿ. ಜಯಚಂದ್ರ, ರಾಮಲಿಂಗಾರೆಡ್ಡಿ, ಎಸ್.ಆರ್. ಪಾಟೀಲ್, ಎಂ.ಬಿ. ಪಾಟೀಲ್, ಕೆ.ಜೆ. ಜಾರ್ಜ್, ಎಚ್.ಕೆ. ಪಾಟೀಲ್, ಎಚ್.ಎಂ. ರೇವಣ್ಣ, ಯು.ಟಿ. ಖಾದರ್, ಡಿ.ಕೆ. ಸುರೇಶ್, ಸಲೀಂ ಅಹಮದ್, ಚಲುವರಾಯಸ್ವಾಮಿ, ಎಂ. ಕೃಷ್ಣಪ್ಪ, ವಿ.ಎಸ್. ಉಗ್ರಪ್ಪ ಮತ್ತಿತರರು ಭಾಗವಹಿಸಿದ್ದರು.
Comments are closed.