ಕರ್ನಾಟಕ

ಭೂಗತ ಲೋಕದ ಮಾಜಿ ಡಾನ್ ಮುತ್ತಪ್ಪ ರೈ ನಿಧನ

Pinterest LinkedIn Tumblr

ಬೆಂಗಳೂರು: ಭೂಗತ ಲೋಕದ ಮಾಜಿ ಡಾನ್ ಮುತ್ತಪ್ಪ ರೈ (68) ಶುಕ್ರವಾರ ಬೆಳಗ್ಗೆ ಎರಡು ಗಂಟೆ ಸುಮಾರಿಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ ಕಳೆದ ಒಂದು ವರ್ಷದ ಹಿಂದೆ ಕ್ಯಾನ್ಸರ್ಗೆ ತುತ್ತಾಗಿದ್ದ ಅವರು ಕೆಲವು ದಿನದಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಎರಡು ದಿನಗಳಿಂದ ಚಿತಾಂಜನಕ ಸ್ಥಿತಿಯಲ್ಲಿದ್ದ ಅವರು, ಇಂದು ಬೆಳಂಬೆಳಗ್ಗೆ ಅಲ್ಲಿಯೇ ಕೊನೆಯುಸಿರು ಎಳೆದರು.

ಅವರಿಗೆ ಇಬ್ಬರು ಪುತ್ರರು, ಮೂವರು ಸಹೋದರರು ಹಾಗೂ ಒಬ್ಬ ಸಹೋದರಿ ಇದ್ದಾರೆ. ರಾಮನಗರ ತಾಲೂಕಿನ ಬಿಡದಿಯಲ್ಲಿ ಇರುವ ಅವರ ಸ್ವಗೃಹದಲ್ಲಿ ಕೆಲವೇ ಕುಟುಂಬ ಸದಸ್ಯರ ಸಮ್ಮುಖದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಸಾರ್ವಜನಿಕರಿಗೆ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಅವಕಾಶ ಇಲ್ಲ ಎಂದು ಕುಟುಂಬದವರು ತಿಳಿಸಿದ್ದಾರೆ.

ಇತ್ತೆಚೆಗಷ್ಟೆ ಸುದ್ದಿಗೋಷ್ಠಿ ನಡೆಸಿ, ಎಲ್ಲರಿಗು ಧನ್ಯವಾದ ಹೇಳಿದ್ದರು. ಜತೆಗೆ ಕ್ಯಾನ್ಸರ್ ಗೆದ್ದು ಬರುವುದಾಗಿಯು ಹೇಳಿದ್ದರು. ಇವರ ಸಾವಿನ ಬಗ್ಗೆ ಎರಡು ಭಾರಿ ವದಂತಿ ಹಬ್ಬಿದ್ದನ್ನು ಈ ವೇಳೆ ಸ್ಮರಿಸಬಹುದು.

ಮುತ್ತಪ್ಪ ರೈ ಹಿರಿಯ ಪುತ್ರ ರಾಕಿ ಸದ್ಯ ಕೆನಡಾದಲ್ಲಿ ಇದ್ದಾರೆ. ಕೋವಿಡ್-19 ಲಾಕ್ ಡೌನ್ ನಿಂದ ವಿಮಾನ ಸಂಚಾರ ರದ್ದಾಗಿದ್ದು, ಅವರು ಪಾಲ್ಗೊಳ್ಳುವ ಸಾಧ್ಯತೆ‌ ಕಡಿಮೆ. ಹೀಗಾಗಿ‌ ಕಿರಿಯ ಪುತ್ರ ರಿಕ್ತಿ ತಂದೆಯ ಅಂತಿಮ‌ ಸಂಸ್ಕಾರ ನೆರವೇರಿಸಲಿದ್ದಾರೆ. ಮಧ್ಯಾಹ್ನ 2 ಗಂಟೆ ಸುಮಾರಿಗೆ ಅಂತ್ಯಕ್ರಿಯೆ ನಡೆಯಲಿದೆ.

Comments are closed.