ಬೆಂಗಳೂರು: ಕೋವಿಡ್-19 ಲಾಕ್ ಡೌನ್ ಕಾರಣದಿಂದ ಬಾಕಿಯಾಗಿರುವ ದ್ವಿತೀಯ ಪಿಯುಸಿಯ ಒಂದು ಪರೀಕ್ಷೆಯನ್ನು ಜೂನ್ ತಿಂಗಳಲ್ಲಿ ನಡೆಸಲು ಇಲಾಖೆ ನಿರ್ಧರಿಸಿದೆ. ಲಾಕ್ ಡೌನ್ ಕಾರಣದಿಂದ ಕೆಲವು ವಿದ್ಯಾರ್ಥಿಗಳು ಅನ್ಯ ಜಿಲ್ಲೆಗಳಲ್ಲಿ ಸಿಲುಕಿದ್ದು ಅವರಿಗಾಗಿ ಇಲಾಖೆ ಅನುಕೂಲ ಕಲ್ಪಿಸಿದೆ. ವಿದ್ಯಾರ್ಥಿಗಳು ಯಾವ ಜಿಲ್ಲೆಯಲ್ಲಿ ಸಿಲುಕಿದ್ದಾರೋ ಅಲ್ಲಿಂದಲೇ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ.
ಪದವಿ ಪೂರ್ವ ಶಿಕ್ಷಣ ಇಲಾಖೆ ಈ ಬಗ್ಗೆ ಸುತ್ತೋಲೆ ಹೊರಡಿಸಿದ್ದು, ಲಾಕ್ ಡೌನ್ ಕಾರಣದಿಂದ ಇತರ ಜಿಲ್ಲೆಗಳಲ್ಲಿ ಸಿಲುಕಿರುವ ವಿದ್ಯಾರ್ಥಿಗಳು ಅದೇ ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲು ಇಚ್ಛಿಸಿದಲ್ಲಿ ಅಂತಹ ವಿದ್ಯಾರ್ಥಿಗಳು ಇಲಾಖೆಗೆ ಇ ಮೇಲ್ ಮಾಡಿಬೇಕು ಎಂದಿದೆ.
ದೇಶದಲ್ಲಿ ಲಾಕ್ ಡೌನ್ ಘೋಷಣೆಯಾಗುವ ಮೊದಲು ದ್ವಿತೀಯ ಪಿಯುಸಿಯ ಆಂಗ್ಲ ಭಾಷೆ ಹೊರತುಪಡಿಸಿ ಎಲ್ಲಾ ಪರೀಕ್ಷೆಗಳು ಮುಗಿದಿದ್ದವು. ಆಂಗ್ಲ ಭಾಷೆ ಪರೀಕ್ಷೆ ಮಾರ್ಚ್ 23ರಂದು ನಡೆಯಬೇಕಿದ್ದ ಪರೀಕ್ಷೆ ಮುಂದೂಡಿಕೆಯಾಗಿತ್ತು.
ಸದ್ಯ ಇಲಾಖೆ ಜೂನ್ ನಲ್ಲಿ ಪರೀಕ್ಷೆ ಮಾಡಲು ಮುಂದಾಗಿದೆ. ಪರೀಕ್ಷಾ ದಿನಾಂಕವನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಿದೆ.
Comments are closed.