ಬೆಂಗಳೂರು: ಚಂದ್ರಾ ಲೇಔಟ್ ಮೇಲ್ಸೇತುವೆಯಿಂದ ಜಿಗಿದು 40 ವರ್ಷದ ಕೊರೋನಾ ಸೋಂಕಿತ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ ಯಾರೆಂದು ಇನ್ನೂ ಗುರುತು ಪತ್ತೆಯಾಗಿಲ್ಲ, ಸದ್ಯ ಶವವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.
ಅಂಡರ್‌ಪಾಸ್‌ನಲ್ಲಿ ಸುತ್ತಾಡುತ್ತಿದ್ದ ಆತ ಕಿರುಚುತ್ತಿರುವುದನ್ನು ದಾರಿಹೋಕರು ಕೇಳಿಸಿಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸುಮಾರು ಸಂಜೆ 6 ಗಂಟೆ ವೇಳೆಗೆ ಅಂಡರ್ ಪಾಸ್ ಮೇಲೆ ಹತ್ತಿ ಕೆಳಗೆ ಜಿಗಿದಿದ್ದಾನೆ. ಆಟೋ ಚಾಲಕರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ, ಮೃತ ವ್ಯಕ್ತಿ ಹೋಮ್ ಕ್ವಾರಂಟೈನ್ ನಲ್ಲಿದ್ದು ಖಿನ್ನತೆಯಿಂದ ಆತ್ಮಹತ್ಯೆಗೆ ಶರಣಾಗಿರಬಹುದೆಂದು ಶಂಕಿಸಲಾಗಿದೆ.
Comments are closed.