ಬೆಂಗಳೂರು: ಕೋವಿಡ್-19 ಲಾಕ್ ಡೌನ್ ಹಿನ್ನೆಲೆಯಲ್ಲಿ ನೆದರ್‌ಲ್ಯಾಂಡ್ಸ್‌ನ ರಾಜಧಾನಿ ಆಮ್‌ಸ್ಟರ್‌ಡ್ಯಾಂನಲ್ಲಿ ಸಿಲುಕಿದ್ದ 206 ಅನಿವಾಸಿ ಭಾರತೀಯರು ಶುಕ್ರವಾರ ಬೆಳಗ್ಗೆ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.
ಈ ಕುರಿತು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಮಾಹಿತಿ ನೀಡಿದ್ದು, ಆಮ್ ಸ್ಟರ್ ಡ್ಯಾಂನಿಂದ ಬಂದ ಅನಿವಾಸಿ ಭಾರತೀಯರ ಪೈಕಿಯಲ್ಲಿ 2 ಮಕ್ಕಳು, 204 ಪುರುಷರು ಮತ್ತು ಮಹಿಳೆಯರಿದ್ದಾರೆ ಎಂದು ತಿಳಿಸಿದ್ದಾರೆ.
ತಜ್ಞ ವೈದ್ಯರು ಹಾಗೂ ಸಿಬ್ಬಂದಿಗಳು 206 ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಿದ್ದು, ಯಾವುದೇ ಪ್ರಯಾಣಿಕರಲ್ಲಿ ಕೊರೊನಾ ವೈರಾಣು ಸೋಂಕಿನ ಲಕ್ಷಣಗಳು ಕಂಡುಬಂದಿಲ್ಲ. ಸದ್ಯ ಅವರೆಲ್ಲರನ್ನೂ ಕ್ವಾರಂಟೈನ್ ಗೆ ಕಳುಹಿಸಿಕೊಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಆಮ್‌ಸ್ಟರ್‌ಡ್ಯಾಂನಿಂದ ಇಂದು(ಜೂನ್ 12) ಬೆಳಗ್ಗೆ 9.15 ಗಂಟೆಗೆ ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೂವತ್ತೆರಡನೇ ಏರ್ ಇಂಡಿಯಾ ವಿಮಾನದಲ್ಲಿ 204 ಪುರುಷರು ಮತ್ತು ಮಹಿಳೆಯರು, 2 ಮಕ್ಕಳು ಸೇರಿ ಒಟ್ಟು 206 ಅನಿವಾಸಿ ಭಾರತೀಯರು ಪ್ರಯಾಣಿಸಿದ್ದಾರೆ. ಯಾವುದೇ ಪ್ರಯಾಣಿಕರಲ್ಲಿ ಕೊರೋನಾ ಸೋಂಕಿನ ಲಕ್ಷಣಗಳಿಲ್ಲ
— DIPR, Bengaluru Rural District (@B_Rural_DIPR) June 12, 2020
Comments are closed.