ಬೆಂಗಳೂರು: ಬೆಂಗಳೂರು ಮಹಾನಗರದಲ್ಲಿ ಕೋವಿಡ್ – 19 ಸೋಂಕು ಹೆಚ್ವುತ್ತಿರುವ ಹಿನ್ನೆಲೆಯಲ್ಲಿ ಅದನ್ನು ನಿಯಂತ್ರಿಸಲು ಕೈಗೊಳ್ಳಬೇಕಾದ ತುರ್ತು ಕ್ರಮಗಳ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ಅವರು ಇಂದು ತಜ್ಞ ವೈದ್ಯರೊಂದಿಗೆ ಚರ್ಚೆ ನಡೆಸಿದರು.
ಸಭೆಯಲ್ಲಿ ಚರ್ಚೆಯಾದ ಪ್ರಮುಖಾಂಶಗಳು
ಕೋವಿಡ್ ಚಿಕಿತ್ಸೆಗೆ ಹಾಗೂ ನಿರ್ವಹಣೆಗೆ ಅಳವಡಿಸಬೇಕಾದ ಮಾರ್ಗಸೂಚಿಗಳನ್ನು ನಿಗದಿಪಡಿಸುವುದು
ರೋಗ ಲಕ್ಷಣ ಇಲ್ಲದ ಅಥವಾ ಅತ್ಯಂತ ಕಡಿಮೆ ಜ್ವರದ ಲಕ್ಷಣಗಳಿದ್ದರೆ, ಅವರನ್ನು ಮನೆಯಲ್ಲಿಯೇ ಪ್ರತ್ಯೇಕವಾಗಿರಿಸಿ (ಹೋಮ್ ಐಸೋಲೇಷನ್), ಅವರ ಆರೋಗ್ಯದ ಮೇಲೆ ನಿಗಾ ಇಡುವುದು. ಇದರಿಂದ ಆಸ್ಪತ್ರೆಗಳ ಮೇಲೆ ಒತ್ತಡ ಕಡಿಮೆ ಮಾಡುವುದು.
ತೀವ್ರ ಸೋಂಕಿನ ಲಕ್ಷಣಗಳು ಹೊಂದಿರುವವರು ಹಾಗೂ ಇತರ ಆರೋಗ್ಯ ಸಮಸ್ಯೆಗಳಿರುವವರು ಸೋಂಕಿತರಾದಲ್ಲಿ, ಅವರಿಗೆ ಉತ್ತಮ ಚಿಕಿತ್ಸೆ ನೀಡಲು ಆದ್ಯತೆ ನೀಡುವುದು
ಪ್ರಕರಣ ದ್ವಿಗುಣಗೊಳ್ಳುವ ವೇಗ ತಗ್ಗಿಸಬೇಕು. ಮುಚ್ಚಿದ ಸ್ಥಳಗಳು, ನಿಕಟ ಸಂಪರ್ಕ ಹಾಗೂ ಜನಸಂದಣಿಯ ಸ್ಥಳಗಳಲ್ಲಿ ಜನತೆ ಹೆಚ್ಚಿನ ಮುನ್ನೆಚ್ಚರಿಕೆ ವಹಿಸುವುದು
ಟೆಲಿ ಮೆಡಿಸಿನ್ ವ್ಯವಸ್ಥೆಯ ಮೂಲಕ ಹೆಚ್ಚಿನ ರೋಗಿಗಳಿಗೆ ಚಿಕಿತ್ಸೆ ನೀಡುವುದು
ಕ್ಷೇತ್ರದಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಯ ಅಗತ್ಯವಿದೆ. ಸಂಪರ್ಕ ಪತ್ತೆ ಹಚ್ಚಲು ಹೆಚ್ಚುವರಿ ಮಾನವ ಸಂಪನ್ಮೂಲ ಅಗತ್ಯವಿದ್ದು, ಇತರ ಇಲಾಖೆಯ ಸಿಬ್ಬಂದಿ ಸೇವೆ ಬಳಸಿಕೊಳ್ಳುವುದು
ಟೆಲಿ ಐಸಿಯು ಹಾಗೂ ಚಿಕಿತ್ಸೆಯ ನಿಗದಿತ ಮಾನದಂಡಗಳ ಕುರಿತು ಹೆಚ್ಚಿನ ತರಬೇತಿ ನೀಡುವುದು
ಆಸ್ಪತ್ರೆಗಳಿಗೆ ಆಮ್ಲಜನಕ ಪೂರೈಕೆ ಸರಪಣಿ ಹಾಗೂ ಹೊಸ ಔಷಧಿಗಳ ಪೂರೈಕೆ ಸರಪಣಿ ಅಬಾಧಿತವಾಗಿರಬೇಕು
ರಾಜ್ಯದಲ್ಲಿ ಕೋವಿಡ್ ಕುರಿತು ಭೀತಿಯ ವಾತಾವರಣ ಸೃಷ್ಟಿಯಾಗಿದ್ದು, ಜನರಲ್ಲಿ ವಿಶ್ವಾಸ ಮೂಡಿಸುವ ಕೆಲಸವಾಗಬೇಕಿದೆ
ತಜ್ಞರ ಈ ಅಭಿಪ್ರಾಯಗಳ ಕುರಿತು ಸರ್ಕಾರದ ಹಂತದಲ್ಲಿ ವಿವರವಾಗಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು.
Comments are closed.