ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಶುಕ್ರವಾರ ಒಂದೇ ದಿನ ಬರೋಬ್ಬರಿ 21 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 293ಕ್ಕೇರಿಕೆಯಾಗಿದೆ.
ಕೊರೋನಾ ವೈರಸ್ ನಿಂದಾಗಿ ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ ಐವರು ಸೇರಿದಂತೆ ರಾಜ್ಯದಲ್ಲಿ ಒಟ್ಟು 21 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇಂದು ಬೆಂಗಳೂರಿನಲ್ಲಿ 994, ಬಳ್ಳಾರಿ 97, ದಕ್ಷಿಣ ಕನ್ನಡದಲ್ಲಿ 97, ಕಲಬುರಗಿಯಲ್ಲಿ 72, ತುಮಕೂರಿನಲ್ಲಿ 57, ಬೆಂಗಳೂರು ಗ್ರಾಮಾಂತರದಲ್ಲಿ 44, ಧಾರವಾಡದಲ್ಲಿ 38, ಮೈಸೂರಿನಲ್ಲಿ 35, ಮಂಡ್ಯದಲ್ಲಿ 33, ಬೀದರ್ ನಲ್ಲಿ 28, ಚಾಮರಾಜನಗರದಲ್ಲಿ 24, ಶಿವಮೊಗ್ಗದಲ್ಲಿ 23, ಗದಗದಲ್ಲಿ 19, ಉಡುಪಿ, ಕೊಡಗಿನಲ್ಲಿ ತಲಾ 16, ಯಾದಗಿರಿಯಲ್ಲಿ 14, ಹಾಸನ ಹಾಗೂ ಬೆಳಗಾವಿಯಲ್ಲಿ ತಲಾ 13, ಕೋಲಾರದಲ್ಲಿ 11, ರಾಮನಗರದಲ್ಲಿ 10, ಬಾಗಲಕೋಟೆಯಲ್ಲಿ 8, ರಾಯಚೂರಿನಲ್ಲಿ 7, ದಾವಣಗೆರೆಯಲ್ಲಿ ಹಾಗೂ ಉತ್ತರ ಕನ್ನಡದಲ್ಲಿ ತಲಾ 5, ವಿಜಯಪುರದಲ್ಲಿ, ಕೊಪ್ಪಳದಲ್ಲಿ ತಲಾ 4, ಚಿಕ್ಕಬಳ್ಳಾಪುರ, ಚಿತ್ರದುರ್ಗದಲ್ಲಿ ತಲಾ 3 ಮತ್ತು ಹಾವೇರಿಯಲ್ಲಿ 1 ಪ್ರಕರಣ ಸೇರಿದಂತೆ ರಾಜ್ಯದಲ್ಲಿ ಹೊಸದಾಗಿ 1694 ಮಂದಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದ್ದು, ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 19710ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಚೇತರಿಕೆಯ ಪ್ರಮಾಣ ಕೂಡ ಉತ್ತಮವಾಗಿದ್ದು, ಶುಕ್ರವಾರ 471 ಮಂದಿ ಗುಣಮುಖರಾಗಿದ್ದಾರೆ. ಇದರಿಂದ ಚೇತರಿಕೆ ಕಂಡವರ ಸಂಖ್ಯೆ 8805ಕ್ಕೇರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 10608 ಸಕ್ರಿಯ ಪ್ರಕರಣಗಳಿದ್ದು, ಈ ಪೈಕಿ 201 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬಳ್ಳಾರಿಯಲ್ಲಿ ಒಬ್ಬರು, ಚಿಕ್ಕಬಳ್ಳಾಪುರದಲ್ಲಿ ಇಬ್ಬರು, ಬೆಂಗಳೂರಿನಲ್ಲಿ ಐವರು, ವಿಜಯಪುರ ಹಾಗೂ ಚಿಕ್ಕಬಳ್ಳಾಪುರದಲ್ಲಿ ತಲಾ ಇಬ್ಬರು, ಕಲಬುರಗಿಯಲ್ಲಿ ಮೂವರು, ಹಾಸನದಲ್ಲಿ ಒಬ್ಬರು, ದಾವಣಗೆರೆಯಲ್ಲಿ ಒಬ್ಬರು, ಬೀದರ್ ನಲ್ಲಿ ಒಬ್ಬರು, ಬೆಂಗಳೂರು ಗ್ರಾಮಾಂತರದಲ್ಲಿ ಒಬ್ಬರು ಹಾಗೂ ರಾಯಚೂರಿನಲ್ಲಿ ಒಬ್ಬರು ಕೊರೋನಾದಿಂದ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
Comments are closed.