ಕರ್ನಾಟಕ

ಬೆಂಗಳೂರಿನಲ್ಲಿ ಕೊರೋನಾ ಸೋಂಕು ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆ; ಮಂಗಳವಾರದಿಂದ 7 ದಿನ ಲಾಕ್ ಡೌನ್

Pinterest LinkedIn Tumblr

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೋನಾ ಸೋಂಕು ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಜುಲೈ14ರಿಂದ ಜುಲೈ 23ರವರೆಗೆ ಲಾಕ್ ಡೌನ್ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ತಜ್ಞರು ಹಾಗೂ ಜನಪ್ರತಿನಿಧಿಗಳ ಆಗ್ರಹದ ಮೇರೆಗೆ ಕೊನೆಗೂ ರಾಜ್ಯ ಸರ್ಕಾರ ಲಾಕ್‌ಡೌನ್ ಮೊರೆ ಹೋಗಿದೆ. ರಾಜ್ಯದಲ್ಲಿ ದಿನೇ ದಿನೇ ಭಾರಿ ಸಂಖ್ಯೆಯಲ್ಲಿ ಕೋವಿಡ್-19 ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ತಜ್ಞರ ಸಲಹೆ ಮೇರೆಗೆ ಜು.14ರ ಮಂಗಳವಾರ ರಾತ್ರಿ 8 ಗಂಟೆಯಿಂದ ಜುಲೈ 23ರ ಬೆಳಗ್ಗೆ ಗಂಟೆಯ ವರೆಗೆ 1 ವಾರಗಳ ಕಾಲ ಅಂದರೆ ಜುಲೈ 23ರ ಬೆಳಿಗ್ಗೆ 5 ಗಂಟೆಯವರೆಗೆ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಲು ನಿರ್ಧರಿಸಲಾಗಿದೆ.

ಈ ಬಗ್ಗೆ ಟ್ವಿಟರ್ ನಲ್ಲಿ ಮಾಹಿತಿ ನೀಡಿರುವ ಸಿಎಂ ಬಿಎಸ್ ಯಡಿಯೂರಪ್ಪ ಅವರು, ‘ಇತ್ತೀಚಿಗೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ, ಸೋಂಕು ನಿಯಂತ್ರಣದ ದೃಷ್ಟಿಯಿಂದ, ತಜ್ಞರ ಸಲಹೆಗಳನ್ನು ಗಮನದಲ್ಲಿಟ್ಟುಕೊಂಡು, ಬರುವ ಮಂಗಳವಾರ, ಜುಲೈ 14ರ ರಾತ್ರಿ 8:00 ರಿಂದ 7 ದಿನಗಳ ವರೆಗೆ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್ ಡೌನ್ ಜಾರಿ ಮಾಡಲಾಗುವುದು. ಈ ಅವಧಿಯಲ್ಲಿ ಅಗತ್ಯ ಸೇವೆಗಳು ಯಾವುದೇ ಅಡೆತಡೆಯಿಲ್ಲದೆ ಮುಂದುವರಿಯಲಿದ್ದು, ವಿವರವಾದ ಮಾರ್ಗಸೂಚಿಗಳನ್ನು ಸೋಮವಾರ ಬಿಡುಗಡೆ ಮಾಡಲಾಗುವುದು. ಈಗಾಗಲೇ ನಿಗದಿಯಾಗಿರುವಂತೆ ವೈದ್ಯಕೀಯ ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳನ್ನು ನಡೆಸಲಾಗುವುದು. ಲಾಕ್ ಡೌನ್ ಸಂದರ್ಭದಲ್ಲಿ ಜನರು ಯಾವುದೇ ಆತಂಕಕ್ಕೆ ಒಳಗಾಗದೇ ಸಹಕರಿಸಲು ಕೋರಿದೆ ಎಂದು ಟ್ವೀಟ್ ಮಾಡಿದ್ದಾರೆ.

Comments are closed.