ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಕೊರೊನಾ ವಾರಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಪೊಲೀಸರೊಬ್ಬರು ಕೊರೊನಾಗೆ ಬಲಿಯಾಗಿದ್ದಾರೆ.
ನಗರದ ವಿದ್ಯಾನಗರ ಠಾಣೆಯ 55 ವರ್ಷದ ಎಎಸ್ಐ ಕೋವಿಡ್-19 ಚಿಕಿತ್ಸೆಗೆ ಸ್ಪಂದಿಸದೇ ಬುಧವಾರ ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ.
ಹಾವೇರಿ ಮೂಲದವರಾಗಿದ್ದ ಅವರಲ್ಲಿ ಕೊರೊನಾ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡ ಹಿನ್ನಲೆಯಲ್ಲಿ ಜು. 1ರಿಂದ ಹೋಂ ಕ್ವಾರಂಟೈನ್‌ಗೆ ಒಳಪಡಿಸಿ, ಗಂಟಲು ದ್ರವದ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳಿಸಲಾಗಿತ್ತು. ನಂತರ ಜು. 7ರಂದು ಅವರಿಗೆ ಸೋಂಕು ಇರುವುದು ವೈದ್ಯಕೀಯ ವರದಿಯಿಂದ ದೃಢಪಟ್ಟಿತ್ತು. ತಕ್ಷಣವೇ ಅವರನ್ನು, ಕೋವಿಡ್ ಆಸ್ಪತ್ರೆ ಕಿಮ್ಸ್‌ಗೆ ದಾಖಲಿಸಿ ಚಿಕಿತ್ಸೆ ಗೆ ಒಳಪಡಿಸಲಾಗಿತ್ತು. ಮೃತರು ಕೆಲ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು ಎನ್ನಲಾಗಿದೆ.
Comments are closed.