ಅಥಣಿ: ಕೊರೋನಾ ವೈರಸ್ ಪ್ರತೀಯೊಬ್ಬ ವ್ಯಕ್ತಿಯನ್ನೂ ಅತಂಕಕ್ಕೊಳಗಾಗುವಂತೆ ಮಾಡಿದೆ. ಕೊರೋನಾ ಅಲ್ಲದೆ, ಇತರೆ ರೋಗಗಳಿಂದ ಸಾವನ್ನಪ್ಪಿದ್ದರೂ ಕೂಡ ಜನರು ಸಹಾಯಕ್ಕೆ ಬರಲು ಹಿಂದೂ ಮುಂದು ನೋಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಬೆಳಗಾವಿ ಜಿಲ್ಲೆಯಲ್ಲಿ ಇಂತಹದ್ದೇ ಒಂದು ಅಮಾನವೀಯ ಘಟನೆ ನಡೆದಿದೆ. ವ್ಯಕ್ತಿಯೋರ್ವ ಅನಾರೋಗ್ಯದಿಂದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು, ಸಹಾಯಕ್ಕೆ ಯಾರೂ ಧಾವಿಸದ ಹಿನ್ನೆಲೆಯಲ್ಲಿ ಆತನ ಪತ್ನಿ ತಳ್ಳೋ ಗಾಡಿಯಲ್ಲಿ ಶವ ಸಾಗಿಸಿ ಅಂತ್ಯಸಂಸ್ಕಾರ ನೆರವೇರಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ನಡೆದಿದೆ.
ಸದಾಶಿವ ಹಿರಟ್ಟಿ (55) ಸಾವನ್ನಪ್ಪಿದ ವ್ಯಕ್ತಿಯಾಗಿದ್ದಾರೆ. ಅನಾರೋಗ್ಯದಿಂದ ಬಳಲಿ ತೀರಿಹೋದ ಪತಿಯ ಅಂತ್ಯಸಂಸ್ಕಾರಕ್ಕೆ ಯಾರೂ ಬಾರದ ಹಿನ್ನೆಲೆಯಲ್ಲಿ ತಳ್ಳೋ ಗಾಡಿಯಲ್ಲಿ ಪರಿಚಯಸ್ಥರೊಬ್ಬರ ಸಹಾಯದಿಂದ ಶವ ಸಾಗಿಸಿದ್ದಾರೆ.
ಸರ್ಕಾರಿ ಆಸ್ಪತ್ರೆಯ ಮುಂದೆ ಸದಾಶಿವ ಅವರು ಚಪ್ಪಲಿ ಹೊಲಿದುಕೊಂಡು ಜೀವನ ನಡೆಸುತ್ತಿದ್ದರು. ಕೆಲ ದಿನಗಳ ಹಿಂದೆ ಮನೆಹೆ ಹೋಗಿ ಮಲಗಿದ್ದ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಬಳಿಕ ಸ್ಥಳೀಯರು ಆತನ ಪತ್ನಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಕೊರೋನಾದಿಂದ ವ್ಯಕ್ತಿ ಸಾವನ್ನಪ್ಪಿರಬಹುದು ಎಂದು ಸ್ಥಳೀಯರು, ಸಂಬಂಧಿಕರಾರು ಹತ್ತಿರಕ್ಕೆ, ಸಹಾಯಕ್ಕೆ ಬಂದಿಲ್ಲ. ಈ ಹಿನ್ನೆಲೆಯಲ್ಲಿ ಮಹಿಳೆ ಮೃತದೇಹವನ್ನು ಬಟ್ಟೆಯಲ್ಲಿ ಸುತ್ತಿ ಶವ ಸಾಗಿಸಿ, ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆಂದು ತಿಳಿದುಬಂದಿದೆ.
Comments are closed.