ಕರ್ನಾಟಕ

ಬೆಂಗಳೂರು ಗಲಭೆ; ಒಟ್ಟು 7 ಎಫ್ಐಆರ್-22 ಮಂದಿ ಪ್ರಮುಖರ ಹೆಸರುಗಳ ಸೇರ್ಪಡೆಗೊಳಿಸಿದ ಪೊಲೀಸರು

Pinterest LinkedIn Tumblr

ಬೆಂಗಳೂರು: ನಗರದ ಡಿಜೆ ಹಳ್ಳಿ ಹಾಗೂ ಕೆ.ಜಿ ಹಳ್ಳಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸರು ಒಟ್ಟು 7 ಎಫ್ಐಆರ್ ಗಳನ್ನು ದಾಖಲು ಮಾಡಿಕೊಂಡಿದ್ದು, ಎಫ್ಐಆರ್ ನಲ್ಲಿ 22 ಮಂದಿ ಪ್ರಮುಖರ ಹೆಸರುಗಳನ್ನು ಸೇರ್ಪಡೆಗೊಳಿಸಿದೆ ಎಂದು ತಿಳಿದುಬಂದಿದೆ.

ಎಫ್ಐಆರ್ ನಲ್ಲಿ ದಾಖಲಾಗಿರುವ 22 ಮಂದಿಯ ಪೈಕಿ 16 ಮಂದಿ ಎಸ್’ಡಿಪಿಐ ಸದಸ್ಯರಾಗಿದ್ದು, ಇದರಲ್ಲಿ ಬಹುತೇಕರನ್ನು ಈಗಾಗಲೇ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಪ್ರಕರಣ ಸಂಬಂಧ ಕಾವಲ್ ಬೈರಸಂದ್ರ ನಿವಾಸಿಯಾಗಿರುವ ಎಸ್’ಡಿಪಿಐ ಬೆಂಗಳೂರು ಜಿಲ್ಲಾ ಕಾರ್ಯದರ್ಶಿ ಮುಜಾಮ್ಮಿಲ್ ಪಾಷಾ (36) ಅವರನ್ನು ಪೊಲೀಸರು ಬಂಧಿಸಿದ್ದಾರೆಂದು ತಿಳಿದುಬಂದಿದೆ.

ಮಂಗಳವಾರ ರಾತ್ರಿ ನಡೆದ ಗಲಭೆ ಪ್ರಕರಣದಲ್ಲಿ 300ಕ್ಕೂ ಹೆಚ್ಚು ಮಂದಿ ಭಾಗಿಯಾಗಿದ್ದು, ಪ್ರಕರಣ ಸಂಬಂಧ 7 ಮಂದಿಯ ಪೈಕಿ 6 ಮಂದಿ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

7ನೇ ವ್ಯಕ್ತಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿಯವರ ಸಂಬಂಧಿ ನವೀನ್ ಪಿ ಆಗಿದ್ದು, ಸಾಮಾಜಿಕ ಕಾರ್ಯಕರ್ತ ಫಿರ್ದೋಸ್ ಪಾಷಾ ಅವರು ನೀಡಿದ ದೂರಿನ ಆಧಾರದ ಮೇಲೆ ನವೀನ್ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಎಫ್ಐಆರ್ ನಲ್ಲಿ ಕೊಲೆ ಯತ್ನ, ಸಾರ್ವಜನಿಕರ ಆಸ್ತಿಪಾಸ್ತಿಗೆ ನಷ್ಟ ಉಂಟು ಮಾಡಿರುವುದು ಹಾಗೂ ಪೊಲೀಸರು ಕರ್ತವ್ಯ ನಿರ್ವಹಿಸಲು ತಡೆಯುಂಟು ಮಾಡಿರುವ ಅಂಶಗಳು ದಾಖಲಾಗಿವೆ ಎಂದು ತಿಳಿದುಬಂದಿದೆ.

Comments are closed.