ಕರ್ನಾಟಕ

ಅವತಾರ ಪುರುಷ ಚಿತ್ರೀಕರಣದ ವೇಳೆ ಅನಾರೋಗ್ಯ: ನಟ ಶರಣ್ ಆಸ್ಪತ್ರೆಗೆ ದಾಖಲು

Pinterest LinkedIn Tumblr

ಬೆಂಗಳೂರು: ಸ್ಯಾಂಡಲ್ ವುಡ್ ನಟ ಶರಣ್ ಅವರಿಗೆ ಅನಾರೋಗ್ಯ ಕಾಣಿಸಿಕೊಂಡ ಹಿನ್ನಲೆಯಲ್ಲಿ ಅವರನ್ನು ಬೆಂಗಳೂರು ನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಿತ್ರೀಕರಣದಲ್ಲಿ ತೊಡಗಿದ್ದ ಶರಣ್ ಅವರಿಗೆ ಸೆಟ್ ನಲ್ಲಿ ಅನಾರೋಗ್ಯ ಕಾಣಿಸಿಕೊಂಡಿದೆ. ಹೀಗಾಗಿ ಅವರನ್ನು ನಗರದ ಮಲ್ಲಿಗೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶರಣ್ ಅವರು ಸಿಂಪಲ್ ಸುನಿ ನಿರ್ದೇಶನದ ಅವತಾರ ಪುರುಷ ಚಿತ್ರದ ಶೂಟಿಂಗ್ ನಲ್ಲಿ ಭಾಗವಹಿಸಿದ್ದರು. ಈ ವೇಳೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಹೆಚ್ಎಂಟಿ ಗ್ರೌಂಡ್ ನಲ್ಲಿ ಸಿನಿಮಾದ ಶೂಟಿಂಗ್ ನಡೆಯುತ್ತಿತ್ತು. ಅವತಾರ ಪುರುಷ ಚಿತ್ರದಲ್ಲಿ ಶರಣ್ ಅವರಿಗೆ ಆಶಿಕಾ ರಂಗನಾಥ್ ನಾಯಕಿಯಾಗಿದ್ದಾರೆ. ಕೊರೋನಾ ಹಿನ್ನೆಲೆ ಶೂಟಿಂಗ್ ಸ್ಥಗಿತಗೊಂಡಿದ್ದು ಇದೀಗ ಸರ್ಕಾರದ ಮಾರ್ಗ ಸೂಚಿಯಂತೆ ಚಿತ್ರತಂಡ ಕೊನೆಯ ಹಂತದ ಶೂಟಿಂಗ್ ನಡೆಸುತ್ತಿದೆ.

 

Comments are closed.