ಬೆಂಗಳೂರು: ಕುವೈತ್ ದೊರೆ ಅಮೀರ್ ಶೇಖ್ ಸಬಾಹ್ ಅಲ್ ಜಬೀರ್ ಅಲ್ ಸಬಾಹ್ ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇಂದು ಶೋಕಾಚರಣೆ ಆಚರಿಸಲು ಸರ್ಕಾರ ಆದೇಶ ಹೊರಡಿಸಿದೆ.
ಈ ದಿನ ಯಾವುದೇ ಅಧಿಕೃತ ಮನೋರಂಜನಾ ಕಾರ್ಯಕ್ರಮ ಇರುವುದಿಲ್ಲ. ನಿಯಮಿತವಾಗಿ ರಾಷ್ಟ್ರ ಧ್ವಜವನ್ನು ಹಾರಿಸಲ್ಪಡುವ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧಮಟ್ಟದಲ್ಲಿ ಹಾರಿಸಲಾಗುವುದು ಎಂದು ರಾಜ್ಯ ಸರ್ಕಾರ ಆದೇಶದಲ್ಲಿ ತಿಳಿಸಿದೆ.
ಕುವೈತ್ ದೊರೆ ಶೇಖ್ ಸಬಾಹ್ ಅಲ್ ಅಹ್ಮದ್ ಅಲಿ ಜಬೀರ್ ಅವರು ಸೆ.29ರಂದು ನಿಧನರಾಗಿದ್ದರು. ಅವರ ಗೌರವಾರ್ಥವಾಗಿ ನಾಳೆ ದೇಶಾದ್ಯಂತ ಶೋಕಾಚರಣೆ ಆಚರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ಶೋಕಾಚರಣೆಗೆ ಆದೇಶ ಹೊರಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
Comments are closed.