ಕರ್ನಾಟಕ

7 ಲಕ್ಷ ಲಂಚ ಸ್ವೀಕರಿಸುವಾಗ ಎಸಿಬಿ ಬಲೆಗೆ ಸಿಕ್ಕಿಬಿದ್ದ ಮಹಿಳಾ ತಹಶೀಲ್ದಾರ್

Pinterest LinkedIn Tumblr


ಬೆಂಗಳೂರು: ಮಹಿಳಾ ತಹಶೀಲ್ದಾರ್ ರೊಬ್ಬರು 7 ಲಕ್ಷ ಲಂಚ ಸ್ವೀಕರಿಸುವಾಗ ಎಸಿಬಿ ಬಲೆಗೆ ಸಿಕ್ಕಿ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಕೆಜಿ ರೋಡ್‍ನಲ್ಲಿರುವ ತಹಶೀಲ್ದಾರ್ ಕಚೇರಿ ವಿಶೇಷ ಮಹಿಳಾ ತಹಶೀಲ್ದಾರ್ ಲಕ್ಷ್ಮೀ ಮತ್ತು ಕ್ಲರ್ಕ್ ಪ್ರಸನ್ನಕುಮಾರ್ ಎಸಿಬಿ ಬಲೆಗೆ ಬಿದ್ದ ಅಧಿಕಾರಿಗಳು. ಅಜಂ ಪಾಷಾ ಎಂಬುವರ ಬಳಿ 7 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದ ವಿಶೇಷ ತಹಶೀಲ್ದಾರ್ ಲಕ್ಷ್ಮೀ, 5 ಲಕ್ಷ ಹಣ ಪಡೆಯುವಾಗ ರೇಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ.

ಜಮೀನು ಆರ್.ಟಿ.ಸಿ ಮಾಡಿ ಕೊಡುವ ಕೆಲಸಕ್ಕೆ ಲಕ್ಷ್ಮೀ ಮತ್ತು ಪ್ರಸನ್ನ ಕುಮಾರ್ ಸೇರಿಕೊಂಡು 7 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಇದರಲ್ಲಿ 5 ಲಕ್ಷ ತಹಶೀಲ್ದಾರ್ ಲಕ್ಷ್ಮೀಗೆ ಹಾಗೂ ಉಳಿದ ಎರಡು ಲಕ್ಷ ಕ್ಲರ್ಕ್ ಪ್ರಸನ್ನಕುಮಾರಿಗೆ ಎಂದು ಹಂಚಿಕೊಂಡಿದ್ದಾರೆ. ಈ ವೇಳೆ ಲಕ್ಷ್ಮೀ 5 ಲಕ್ಷ ಹಣ ಪಡೆಯುವಾಗ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದು, ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

ಜೊತೆಗೆ 2 ಲಕ್ಷ ಲಂಚ ಪಡೆದ ಪ್ರಸನ್ನಕುಮಾರ್ ಕೂಡ ಎಸಿಬಿ ಬಲೆಗೆ ಬಿದ್ದಿದ್ದಾರೆ. ಇನ್ನೂ ಕೇವಲ 20 ದಿನದಲ್ಲಿ ವಿಶೇಷ ತಹಶೀಲ್ದಾರ್ ಲಕ್ಷ್ಮೀ ನಿವೃತ್ತಿ ಹೊಂದಬೇಕಿತ್ತು. ಇವರು ಕೆ.ಜಿ ರಸ್ತೆಯಲ್ಲಿರುವ ಕಂದಾಯ ಭವನದಲ್ಲಿರುವ ವಿಶೇಷ ತಶೀಲ್ದಾರ್ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

Comments are closed.