ಕರ್ನಾಟಕ

ಮಾಜಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಆರ್.ಆರ್. ನಗರ ಕ್ಷೇತ್ರದ ಪರಾಜಿತ ಅಭ್ಯರ್ಥಿ‌ ಕುಸುಮಾ

Pinterest LinkedIn Tumblr

ಬೆಂಗಳೂರು: ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರು ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ನಿವಾಸದಲ್ಲಿ ಅವರನ್ನು ಭೇಟಿಯಾಗಿ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಫಲಿತಾಂಶದ ಕುರಿತು ಚರ್ಚಿಸಿದರು.

ಬಳಿಕ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಜನರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ವಿರೋಧ ಪಕ್ಷದ ಪಾತ್ರದ ಕುರಿತು ಉಪಯುಕ್ತ ಸಲಹೆಗಳನ್ನು ಪಡೆದು ಕ್ಷೇತ್ರದಲ್ಲಿ ಪಕ್ಷದ ಬಲವರ್ಧನೆಯ ನಿಟ್ಟಿನಲ್ಲಿ ಮುಂದಿನ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲಾಗಿದೆ.
ಸ್ವಸ್ಥ, ಸದೃಡ ಸಮಾಜವನ್ನು ಕಟ್ಟಲು ಈ ಎಲ್ಲ ಸಲಹೆಗಳನ್ನು ಪಡೆದು ಮುಂದುವರೆಯುತ್ತಿದ್ದೇನೆ ಎಂದರು.

ಈ ಸಂದರ್ಭದಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹಾಗೂ ವಿಧಾನ ಪರಿಷತ್ ಸದಸ್ಯ ನಜೀರ್ ಅಹಮದ್ ಅವರು ಸೇರಿದಂತೆ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.

Comments are closed.