ಹಾಸನ: ನ.16ರಂದು ಚನ್ನರಾಯಪಟ್ಟಣ ತಾಲ್ಲೂಕಿನ ಬಾಗೂರು ಬಳಿಯ ಹೇಮಾವತಿ ಕಾಲುವೆ ಸುರಂಗದ ಬಳಿ ಬೈಕ್ ನಿಲ್ಲಿಸಿ ಜೋಡಿ ನಾಪತ್ತೆಯಾಗಿತ್ತು. ಇದೀಗ ಇಬ್ಬರ ಮೃತದೇಹ ತುಮಕೂರು ಜಿಲ್ಲೆ ನೊಣವಿನಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪತ್ತೆಯಾಗಿದೆ. ಹೇಮಾವತಿ ನಾಲೆಯಲ್ಲಿ ಪತ್ತೆಯಾಗಿದ್ದು, ಒಬ್ಬರನ್ನೊಬ್ಬರು ಬಟ್ಟೆಯಿಂದ ಕಟ್ಟಿಕೊಂಡು ನಾಲೆಗೆ ಜಿಗಿದಿರುವ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.
ಚನ್ನರಾಯಪಟ್ಟಣ ತಾಲೂಕಿನ ಹಿರಿಸಾವೆ ಗ್ರಾಮದ ಸುಶ್ಮಿತ(18), ಹಾಗು ಮತಿಘಟ್ಟ ಗ್ರಾಮದ ರಮೇಶ್(19) ಮೃತರು. ಐಟಿಐ ಓದುತ್ತಿದ್ದ ರಮೇಶ್ ಹಾಗೂ ಪದವಿ ಓದುತ್ತಿದ್ದ ಸುಶ್ಮಿತಾ ನಡುವೆ ಪ್ರೇಮಾಂಕುರವಾಗಿತ್ತು. ಇವರಿಬ್ಬರು ಒಂದು ವರ್ಷದಿಂದ ಪ್ರೀತಿಸುತ್ತಿದ್ದರು. ಇಬ್ಬರೂ ಸಹ ಬೇರೆ ಬೇರೆ ಜಾತಿಯಾಗಿದ್ದರಿಂದ ಮನೆಯಲ್ಲಿ ಮದುವೆಗೆ ವಿರೋಧ ಇತ್ತು. ಮನೆಯವರ ವಿರೋಧಕ್ಕೆ ಹೆದರಿ ಯುವಜೋಡಿ ಆತ್ಮಹತ್ಯೆ ಮಾಡಿಕೊಂಡಿದೆ.
18 ವರ್ಷದ ಸುಶ್ಮಿತ, 19 ವರ್ಷದ ರಮೇಶ್ ಮೃತ ದುರ್ದೈವಿಗಳು. ಹಿರೀಸಾವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಿಸ್ಸಿಂಗ್ ಕೇಸ್ ದಾಖಲಾಗಿತ್ತು. ತುಮಕೂರು ಜಿಲ್ಲೆಯ ವ್ಯಾಪ್ತಿಯಲ್ಲಿ ನಾಲೆಯಲ್ಲಿ ಮೃತದೇಹ ಪತ್ತೆಯಾಗಿದೆ. ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದು, ಮನೆಯವರ ವಿರೋಧಕ್ಕೆ ಹೆದರಿ ಆತ್ಮಹತ್ಯೆಗೆ ಶಾರಣಾಗಿರಬಹುದು ಎನ್ನಲಾಗುತ್ತಿದೆ.
ಅಷ್ಟೇ ಅಲ್ಲದೇ ಪ್ರೇಮಿಗಳು ತಾವೇ ಆತ್ಮಹತ್ಯೆಗೆ ಶರಣಾಗಿದ್ದಾರೋ ಅಥವಾ ಯಾರಾದರೂ ಕೊಲೆ ಮಾಡಿ ನಾಲೆಗೆ ಎಸೆದಿದ್ದಾರೋ ಎಂಬ ಅನುಮಾನವೂ ವ್ಯಕ್ತವಾಗುತ್ತಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Comments are closed.