ಬೆಂಗಳೂರು: ರಾಜ್ಯದಲ್ಲಿ ಜನವರಿ 1ರಿಂದ ಶಾಲಾ-ಕಾಲೇಜುಗಳು ಆರಂಭ ಆಗುತ್ತಿರುವ ಹಿನ್ನೆಲೆಯಲ್ಲಿ ಇಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ನಗರದ ವಿವಿಧ ಸರ್ಕಾರಿ-ಖಾಸಗಿ ಪ್ರೌಢಶಾಲೆಗಳು, ಪದವಿಪೂರ್ವ ಕಾಲೇಜುಗಳಿಗೆ ಭೇಟಿ ನೀಡಿ ಅಲ್ಲಿನ ಮುಂಜಾಗ್ರತಾ ಕ್ರಮಗಳು, ಸಿದ್ಧತೆಯನ್ನ ಪರಿಶೀಲನೆ ನಡೆಸಿದರು.
ಈ ವೇಳೆ ಶಿಕ್ಷಕರಿಗೆ ಸಲಹೆ ನೀಡಿದ ಸಚಿವರು, ‘ ಸರ್ಕಾರಿ ಶಾಲೆ ಮತ್ತು ಕಾಲೇಜುಗಳಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕೊರತೆಯಿಲ್ಲ. ಪ್ರತಿಯೊಬ್ಬರ ವಿದ್ಯಾರ್ಥಿಯಲ್ಲೂ ಹೆಚ್ಚಿನ ಅಂಕಗಳನ್ನು ಪಡೆಯಬೇಕು ಎಂಬ ಹುಮ್ಮಸ್ಸು, ಆಸಕ್ತಿಯನ್ನ ಮೂಡಿಸಬೇಕು’ ಎಂದರು.
ಇನ್ನು ಕೊರೊನಾ ಮುಂಜಾಗ್ರತ ಕ್ರಮಗಳ ಬಗ್ಗೆ ನಿಗಾ ವಹಿಸಬೇಕು ಎಂದಿರುವ ಸುರೇಶ್ ಕುಮಾರ್, ‘ಎಲ್ಲರೂ ಮಾಸ್ಕ್ ಧರಿಸಬೇಕು, ಕೈ ತೊಳೆಯಲು ಸ್ಯಾನಿಟೈಸರ್ ಅಥವಾ ಸಾಬೂನು ಬಳಸಬೇಕು. ಉಪಾಧ್ಯಾಯರು ಕೊವಿಡ್ -19 ಪರೀಕ್ಷಾ ಫಲಿತಾಂಶದೊಂದಿಗೆ ಆಗಮಿಸಬೇಕು. ಇನ್ನು ಮಕ್ಕಳಲ್ಲಿ ದೈಹಿಕ ಅಂತರ ಕಾಪಾಡುವತ್ತ ಗಮನಹರಿಸಬೇಕು. ಒಂದು ಕೊಠಡಿಯಲ್ಲಿ 15 ಮಕ್ಕಳು ಮಾತ್ರ ಇರುವಂತೆ ನೋಡಿಕೊಳ್ಳಬೇಕು’ ಎಂದರು.
Comments are closed.