ಕರ್ನಾಟಕ

ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡ ಒಂದೇ ಕುಟುಂಬದ ನಾಲ್ವರು !

Pinterest LinkedIn Tumblr

ಬೆಳಗಾವಿ: ಒಂದೇ ಕುಟುಂಬದ ನಾಲ್ವರು ಜಿಲ್ಲೆಯ ರಾಯಬಾಗ ಬಳಿ ರೈಲು ಹಳಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ತಡ ರಾತ್ರಿ ನಡೆದಿದೆ.

ಮೃತರನ್ನು ಭಿರಡಿ ಗ್ರಾಮದವರು ಎಂದು ಗುರುತಿಸಲಾಗಿದೆ. ಸಾತಪ್ಪ ಅಣ್ಣಪ್ಪ ಸುತಾರ (60), ಪತ್ನಿ ಮಹಾದೇವಿ ಸಾತಪ್ಪ ಸುತಾರ (50) ಹಾಗೂ ಮಕ್ಕಳಾದ ಸಂತೋಷ ಸಾತಪ್ಪ ಸುತಾರ (26), ದತ್ತಾತ್ರೇಯ ಸಾತಪ್ಪ ಸುತಾರ (28) ಮೃತ ದುರ್ದೈವಿಗಳು.

ಕುಟುಂಬದ ವೃದ್ಧ ತಂದೆ, ತಾಯಿ, ಇಬ್ಬರು ಗಂಡು ಮಕ್ಕಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ನಿನ್ನೆ ರಾತ್ರಿ ನಿಜಾಮುದ್ದೀನ್ ಎಕ್ಸ್‌ಪ್ರೆಸ್‌ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ರಾಯಬಾಗ ತಾಲೂಕು ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನ ರವಾನೆ ಮಾಡಲಾಗಿದೆ. ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಸ್ಥಳಕ್ಕೆ ಭೇಟಿ ನೀಡಿದ್ದ ಪೊಲೀಸರು ತಿಳಿಸಿದ್ದಾರೆ.

Comments are closed.