ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಪ್ರತಾಪ್ಚಂದ್ರ ಶೆಟ್ಟಿಯವರು ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಇಂದು ಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆದಿದ್ದು ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಜೆಡಿಎಸ್ ಹಿರಿಯ ಮುಖಂಡ ಬಸವರಾಜ ಹೊರಟ್ಟಿ ಆಯ್ಕೆಯಾಗಿದ್ದಾರೆ.
ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜೆಡಿಎಸ್ನ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ನೂತನ ಸಭಾಪತಿಯಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ನಜೀರ್ ಅಹಮದ್ ನಾಮಪತ್ರ ಸಲ್ಲಿಸಿದ್ದರೂ, ನಜೀರ್ ಅಹಮ್ಮದ್ ಸೇರಿದಂತೆ ಯಾವುದೇ ಕಾಂಗ್ರೆಸ್ ಸದಸ್ಯರು ಚುನಾವಣೆ ಪ್ರಕ್ರಿಯೆಯಲ್ಲಿ ಭಾಗಿಯಾಗಲಿರಲಿಲ್ಲ. ಬಿಜೆಪಿ ಬೆಂಬಲದೊಂದಿಗೆ ಬಸವರಾಜ ಹೊರಟ್ಟಿ ಆಯ್ಕೆಯಾಗಿದ್ದಾರೆ.
75 ಸದಸ್ಯರ ಬಲದಲ್ಲಿರುವ ವಿಧಾನ ಪರಿಷತ್ನಲ್ಲಿ ಬಿಜೆಪಿ 31 ಸದಸ್ಯರನ್ನು ಹೊಂದಿದ್ದರೆ ಕಾಂಗ್ರೆಸ್ 28, ಜೆಡಿಎಸ್ 13 ಸದಸ್ಯರನ್ನು ಹಾಗೂ ಒಂದು ಪಕ್ಷೇತರ ಸದಸ್ಯರಿದ್ದಾರೆ. ಆದರೆ ಸಭಾಪತಿ ಸ್ಥಾನಕ್ಕೆ ಪ್ರತಾಪಚಂದ್ರ ಶೆಟ್ಟಿ ರಾಜೀನಾಮೆ ನೀಡಿದ ಕಾರಣ ಆ ಸ್ಥಾನ ಖಾಲಿಯಿತ್ತು.
ಬಸವರಾಜ ಹೊರಟ್ಟಿಯವರನ್ನು ನೂತನ ಸಭಾಪತಿಯೆಂದು ಘೋಷಿಸಿದ್ದು ಹೊರಟ್ಟಿ ಅವರು ಸಭಾಪತಿ ಪೀಠವನ್ನು ಅಲಂಕರಿಸಿದರು.
Comments are closed.