ಕರ್ನಾಟಕ

ಕೆಪಿಸಿ‌ಸಿ‌ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾದ ಮಧು ಬಂಗಾರಪ್ಪ..!

Pinterest LinkedIn Tumblr

ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲು ಮುಂದಾಗಿರುವ ಮಾಜಿ ಶಾಸಕ ಹಾಗೂ ಜೆಡಿಎಸ್‌ ಮುಖಂಡ ಮಧು ಬಂಗಾರಪ್ಪ ಶುಕ್ರವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಮಧುಬಂಗಾರಪ್ಪ ಗುರುವಾರ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದರು. ಇದರ ಬೆನ್ನಲ್ಲೇ ಶುಕ್ರವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಭೇಟಿ ಮಾಡಿ, ಕಾಂಗ್ರೆಸ್ ಸೇರ್ಪಡೆ ಬಗ್ಗೆ ಸಮಾಲೋಚನೆ ನಡೆಸಿದರು.

ಮಾಜಿ ಶಾಸಕರೂ ಆಗಿರುವ ಮಧುಬಂಗಾರಪ್ಪ ಕಳೆದ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲು ಅನುಭವಿಸಿದ್ದು ಇತ್ತೀಚೆಗೆ ಜೆಡಿಎಸ್ ಪಕ್ಷದ ಪ್ರಮುಖರ ಜೊತೆ ಅಸಮಾಧಾನಿತರಾಗಿದ್ದಾರೆ.

ಜೆಡಿಎಸ್ ಪಕ್ಷದಲ್ಲಿ ಕಾರ್ಯಕರ್ತರಿಗೆ ಮನ್ನಣೆ ಸಿಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದರು. ಇದೀಗ ಜೆಡಿಎಸ್‌ ತೊರೆದು ಎಪ್ರಿಲ್ ತಿಂಗಳಿನಲ್ಲಿ ಕಾಂಗ್ರೆಸ್ ಸೇರ್ಪಡೆಗೊಳ್ಳುವುದು ಬಹುತೇಕ ಖಚಿತವಾಗಿದೆ.

Comments are closed.