ಬೆಳಗಾವಿ: ರಾಸಲೀಲೆ ಸಿಡಿ ಪ್ರಕರಣದಿಂದ ಸುದ್ದಿಯಲ್ಲಿದ್ದು ಇತ್ತೀಚೆಗೆ ಕೊರೋನಾ ಸೋಂಕಿನ ಕಾರಣದಿಂದಾಗಿ ಆಸ್ಪತ್ರೆ ಸೇರಿದ್ದ ಮಾಜಿ ಸಚಿವ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
ರಮೇಶ್ ಜಾರಕಿಹೊಳಿಯವರು ಏಪ್ರಿಲ್ 4ರಂದು ಕೋವಿಡ್-19 ಸೋಂಕಿನ ಹಿನ್ನೆಲೆಯಲ್ಲಿ ಬೆಳಗಾವಿಯ ಗೋಕಾಕ್ ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಅವರಿಗೆ ಏಪ್ರಿಲ್ 1ರಂದು ಕೊರೋನಾ ಸೋಂಕು ದೃಢಪಟ್ಟಿತ್ತು.
ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿ ಮನೆಯಲ್ಲಿಯೇ ಕ್ವಾರಂಟೈನ್ ಗೆ ಒಳಪಡಲಿದ್ದಾರೆ.
ಯುವತಿಯೊಬ್ಬರಿಗೆ ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದರು ಎಂದು ಮಾರ್ಚ್ 3ರಂದು ಅವರು ಮತ್ತು ಯುವತಿ ಇದ್ದಾರೆ ಎಂದು ತೋರಿಸುವ ಸೆಕ್ಸ್ ಸಿಡಿ ಬಹಿರಂಗವಾಗಿ ಮಾಧ್ಯಮಗಳಲ್ಲಿ ಭಾರೀ ಸುದ್ದಿಯಾದ ನಂತರ ರಮೇಶ್ ಜಾರಕಿಹೊಳಿ ಜಲ ಸಂಪನ್ಮೂಲ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
Comments are closed.