ಕರ್ನಾಟಕ

ಜುಲೈ 19-22 ರಂದು ಎಸ್.ಎಸ್.ಎಲ್.ಸಿ ಪರೀಕ್ಷೆ, ಜುಲೈ ಎರಡನೇ ವಾರ ದ್ವಿತೀಯ ಪಿಯುಸಿ ಫಲಿತಾಂಶ: ಸುರೇಶ್ ಕುಮಾರ್

Pinterest LinkedIn Tumblr

ಬೆಂಗಳೂರು: ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಗೊಂದಲವುಂಟು ಮಾಡಿದ್ದ ಎಸ್ಎಸ್ ಎಲ್.ಸಿ ಪರೀಕ್ಷಾ ದಿನಾಂಕವನ್ನು ಇಲಾಖೆ ಪ್ರಕಟಿಸಿದೆ.

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರು ಜುಲೈ ಮಾಹೆಯಲ್ಲಿ ನಡೆಯಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆಗಳ ಪೂರ್ವ ಸಿದ್ಧತೆಯನ್ನು ಅವಲೋಕಿಸಿದರು. ಶಿಕ್ಷಣ ಸಚಿವ ಸುರೇಶ್‌ಕುಮಾರ್, ಇಂದು ರಾಜ್ಯದ ಎಲ್ಲ‌ ಜಿಲ್ಲಾ‌ಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಮುಖ್ಯ‌ಕಾರ್ಯ‌ ನಿರ್ವಹಣಾಧಿಕಾರಿಗಳಿಗೆ ವಿಡಿಯೋ‌ ಸಂವಾದದ ಮೂಲಕ ಪರೀಕ್ಷೆಗಳು ಯಶಸ್ವಿಯಾಗಿ ನಡೆಯಲು‌ ಎಲ್ಲ ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಸಭೆಯಲ್ಲಿ ನಿರ್ದೇಶನ ನೀಡಿದರು.

ವಿಧಾನಸೌಧದಲ್ಲಿ ಸೋಮವಾರ ಸುದ್ದಿಗೋಷ್ಠಿ ಮೂಲಕ ಮಾಹಿತಿ ನೀಡಿದ ಸಚಿವ ಸುರೇಶ್ ಕುಮಾರ್,”ಜುಲೈ 19 ರಂದು ಗಣಿತ, ವಿಜ್ಞಾನ ಹಾಗೂ ಸಮಾಜ ವಿಜ್ಞಾನ ಪರೀಕ್ಷೆ ನಡೆಯಲಿದೆ. ಜುಲೈ 22 ರಂದು ಭಾಷಾ ವಿಷಯಗಳ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ 8.76 ಲಕ್ಷಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆಯಲಿದ್ದಾರೆ. 7306 ಪರೀಕ್ಷಾ ಕೇಂದ್ರಗಳನ್ನೂ 6 ಸ್ಥಾಪಿಸಲಾಗಿದೆ. ಪರೀಕ್ಷೆಗೆ ಅಗತ್ಯ ಮುನ್ನೆಚ್ಚರಿಕೆ ಕೈಗೊಳ್ಳಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಸೇರಿ‌ ಹಿರಿಯ ಅಧಿಕಾರಿಗಳ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ‌ ಚರ್ಚಿಸಲಾಗಿದೆ.

ಕಳೆದ ಬಾರಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿತ್ತು. ಈ ಬಾರಿ ವಿಶೇಷ ಪರಿಸ್ಥಿತಿ ಮಧ್ಯೆ ಪರೀಕ್ಷೆ ನಡೆಸಲಾಗುತ್ತಿದೆ. ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸುವ ಕೆಲಸ ಮಾಡಬೇಕಿದೆ. ಆರೋಗ್ಯ ಇಲಾಖೆಯ ಆಧಿಕಾರಿಗಳ ಸಲಹೆ ಪಡೆಯಲಾಗಿದೆ.‌ ವಿದ್ಯಾರ್ಥಿಗಳು ಪರೀಕ್ಷೆಗೆ ಸಕಲ‌ ಸಿದ್ದತೆ ಮಾಡಿಕೊಂಡಿದ್ದಾರೆ. ಸಮಾಜವಿಜ್ಞಾನ, ವಿಜ್ಞಾನ ಹಾಗೂ ಗಣಿತದ ಒಂದು ಪತ್ರಿಕೆ ಹಾಗೂ ಕನ್ನಡ ಹಿಂದಿ‌‌ ಇಂಗ್ಲೀಷ್ ಸೇರಿ‌ ಒಂದು ಪರೀಕ್ಷೆ ನಡೆಯಲಿದೆ ಎಂದರು.

ಪರೀಕ್ಷೆಗಳು ಅತ್ಯಂತ ಸರಳವಾಗಿರಲಿದೆ. ಪರೀಕ್ಷಾ ಕೇಂದ್ರಗಳ‌ ಬಳಿ ನಿಷೇಧಾಜ್ಞೆ ಜಾರಿಗೊಳಿಸಲಾಗುವುದು. ಬೇರೆ ಊರುಗಳಿಗೆ ಹೋಗಿರುವ ವಿದ್ಯಾರ್ಥಿಗಳು ತಮ್ಮ ಸಮೀಪದ ಕೇಂದ್ರಗಳಲ್ಲಿ ‌ಪರೀಕ್ಷೆ ಬರೆಯಲು ಅವಕಾಶ‌ ನೀಡಲಾಗಿದ್ದು, 10 ಸಾವಿರ ವಿದ್ಯಾರ್ಥಿಗಳು ‌ಇದರ ಪ್ರಯೋಜನ ಪಡೆಯಲಿದ್ದಾರೆ. ಜೂನ್ 30 ರಂದು ವಿದ್ಯಾರ್ಥಿಗಳ ಹಾಲ್ ಟಿಕೆಟ್ ಗಳನ್ನು ಶಾಲೆಗಳಿಗೆ ಕಳುಹಿಸಲಾಗುವುದು ಎಂದು ಸಚಿವರು ಮಾಹಿತಿ ನೀಡಿದರು.

ಕೊರೊನಾ ಸೋಂಕಿಗೊಳಾಗಿರುವ ವಿದ್ಯಾರ್ಥಿ ಪರೀಕ್ಷೆ ಬರೆಯಲು ಬಯಸಿದರೆ ಪ್ರತ್ಯೇಕ ‌ಕೊಠಡಿಯಲ್ಲಿ ಅವಕಾಶ ಕಲ್ಪಿಸಲು ತೀರ್ಮಾನಿಸಲಾಗಿದೆ.ವಿದ್ಯಾರ್ಥಿಗಳಿಗೆ ಸರ್ಜಿಕಲ್ ಮಾಸ್ಕ್ ಒದಗಿಸಲು ಸಲಹೆ ನೀಡಲಾಗಿದೆ. ಪರೀಕ್ಷಾ ಸಿಬ್ಬಂದಿಗೆ ಎನ್ 95 ಮಾಸ್ಕ್‌ ಕಡ್ಡಾಯ.ಪರೀಕ್ಷಾ ಕೇಂದ್ರಗಳಲ್ಲಿ ಆಶಾ ಕಾರ್ಯಕರ್ತೆಯರು ಹಾಗೂ ಪ್ಯಾರಾ ಮೆಡಿಕಲ್‌ ಸಿಬ್ಬಂದಿ‌‌ ನಿಯೋಜಿಸಲಾಗುವುದು.ಪರೀಕ್ಷೆ ‌ಮಾರ್ಗಸೂಚಿಗಳನ್ನು ಜಿಲ್ಲಾ ಶಿಕ್ಷಣಾಧಿಕಾರಿಗಳಿಗೆ ಕಳುಹಿಸಲಾಗಿದೆ ಎಂದರು.

ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಜುಲೈ ಎರಡನೇ ವಾರದಲ್ಲಿ ‌ಪ್ರಕಟವಾಗಲಿದೆ.ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಶಿಕ್ಷಕ ಸ್ನೇಹಿ ವರ್ಗಾವಣೆ ನೀತಿ ಜಾರಿಗೊಳಿಸಲು ಸುಗ್ರೀವಾಜ್ಞೆ ತರಲಾಗಿದೆ. ಜೂನ್ 30 ರಿಂದ ವರ್ಗಾವಣೆ ಪ್ರಕ್ರಿಯೆ ಆರಂಭವಾಗಲಿದೆ. 75 ಸಾವಿರ ಅರ್ಜಿಗಳು ವರ್ಗಾವಣೆಗೆ ಸ್ವೀಕೃತವಾಗಿದೆ. ಶಿಕ್ಷಕ‌ಮಿತ್ರ ಆಪ್ ಮೂಲಕ‌ ಕೌನ್ಸೆಲಿಂಗ್ ಭಾಗವಹಿಸಿ ವರ್ಗಾವಣೆ ಆಯ್ಕೆ ಮಾಡಿಕೊಳ್ಳಬಹುದಾಗಿದೆ.

ರಾಜ್ಯದಲ್ಲಿ ಶಾಲೆಗಳ‌ ಆರಂಭದ ಬಗ್ಗೆ ಸಾಕಷ್ಟು ಚರ್ಚೆಗಳಾಗಿದೆ. ಡಾ.ದೇವಿಶೆಟ್ಟಿ ವರದಿಯನ್ನು ಅವಲೋಕಿಸಲಾಗಿದೆ. ಗ್ರಾಮೀಣ ಭಾಗದ ಮಕ್ಕಳು ‌ಕಲಿಕೆಯಿಂದ ವಂಚಿತರಾಗಬಾರದು ಎಂಬುದು ‌ನಮ್ಮ‌ ಇಚ್ಚೆ ಯಾಗಿದೆ. ವಿಷಯ ಪರಿಣಿತರು,‌ ಸರ್ಕಾರದ ತಾಂತ್ರಿಕ ಸಲಹೆಗಾರ ರು ಹಾಗೂ ಮಕ್ಕಳ ತಜ್ಞರನ್ನೊಳ ಗೊಂಡ ಟಾಸ್ಕ್ ಪೋರ್ಸ್ ರಚಿಸಲಾಗುವುದು. ಜುಲೈ 1 ರಿಂದ ಚಂದನ ವಾಹಿನಿ‌ ಮೂಲಕ ಎಲ್ಲ ತರಗತಿಗಳಿಗೆ ಪಾಠ ಆರಂಭಿಸಲಾಗುವುದು. ಮೊದಲ ಹಂತದಲ್ಲಿ 8,9,10 ನೇ ತರಗತಿಗಳ‌ ಪಾಠ ಆರಂಭಿಸಲಾಗುವುದು ಎಂದು ಸುರೇಶ್ ಕುಮಾರ್ ಹೇಳಿದರು.

 

Comments are closed.