ಬೆಂಗಳೂರು: ವೀಕೆಂಡ್ ಕರ್ಫ್ಯೂ ಬಗ್ಗೆ ಸಂಜೆ ನಡೆಯಲಿರುವ ತಜ್ಞರು, ಅಧಿಕಾರಿಗಳ ಜೊತೆಗಿನ ಸಭೆಯಲ್ಲಿ ನಿರ್ಧಾರ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು ಕೋವಿಡ್ 1 ಮತ್ತು 2ನೇ ಅಲೆಯ ಅನುಭವಗಳನ್ನು ಗಮನದಲ್ಲಿಟ್ಟುಕೊಂಡು ಮುಂದೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಗಮನಹರಿಸಲಾಗುವುದು. ಅದಕ್ಕಾಗಿ ತಜ್ಞರ ಅಭಿಪ್ರಾಯಗಳನ್ನು ಪರಿಗಣಿಸುತ್ತೇವೆ ಎಂದು ಹೇಳಿದ್ದಾರೆ.
ಇಂದು ಸಾಯಂಕಾಲ ಕೋವಿಡ್ ಸಂಬಂಧಿ ಸಭೆಯನ್ನು ತಜ್ಞರ ಜೊತೆ ಮಾಡುತ್ತೇನೆ, ಕೋವಿಡ್ 3ನೇ ಅಲೆ ನಿಯಂತ್ರಣಕ್ಕೆ ಜನರ ನಿತ್ಯ ಕೆಲಸಗಳಿಗೆ ತೊಂದರೆಯಾಗದಂತೆ ಏನು ಕಠಿಣ ಕ್ರಮ ಕೈಗೊಳ್ಳಬಹುದು ಎಂದು ವೈಜ್ಞಾನಿಕವಾಗಿ ತೀರ್ಮಾನಿಸಲಾಗುವುದು ಎಂದು ತಿಳಿಸಿದ್ದಾರೆ.
ಈ ಬಾರಿ ದೇಶ 75ನೇ ಸ್ವಾತಂತ್ರ್ಯ ವರ್ಷಾಚರಣೆಯನ್ನು ಆಚರಿಸುತ್ತಿದ್ದು ಕೋವಿಡ್ ನಿರ್ಬಂಧಗಳ ನಡುವೆ ಸರಳವಾಗಿ ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ಸರ್ಕಾರ ವತಿಯಿಂದ ಕಾರ್ಯಕ್ರಮ ನಡೆಯಲಿದೆ. ಹಲವು ವಿಷಯಗಳಲ್ಲಿ ಇಂದು ರಾಜ್ಯ ದೇಶಕ್ಕೆ ಮಾದರಿಯಾಗಿದೆ ಎಂದರು.
Comments are closed.