ಬೆಂಗಳೂರು: ಗಣೇಶ ಹಬ್ಬದ ಬಳಿಕ ಎಲ್ಲರೂ ಸೇರಿ ರಾಜ್ಯ ಪ್ರವಾಸ ಮಾಡುತ್ತೇವೆ. ನಾನೊಬ್ಬನೇ ರಾಜ್ಯ ಪ್ರವಾಸ ಮಾಡುವ ಪ್ರಶ್ನೆ ಇಲ್ಲ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಣೇಶ ಹಬ್ಬದ ಬಳಿಕ ಎಲ್ಲರೂ ಜೊತೆಯಾಗಿ ರಾಜ್ಯ ಪ್ರವಾಸ ಮಾಡುತ್ತೇವೆ. ಯಾವ ಜಿಲ್ಲೆಗಳಿಗೆ ಹೋಗಬೇಕು ಎನ್ನುವುದನ್ನು ತೀರ್ಮಾನಿಸುತ್ತೇವೆ. ಬಹಳ ದಿನಗಳ ನಂತರ ಶಿಕಾರಿಪುರ, ಶಿವಮೊಗ್ಗಕ್ಕೆ ಹೋಗುತ್ತಿದ್ದೇನೆ. ಅಲ್ಲಿಂದ ವಾಪಾಸ್ಸು ಬಂದ ನಂತರ ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಇತರ ಮುಖಂಡರೊಂದಿಗೆ ಚರ್ಚೆ ನಡೆಸಿ, ರಾಜ್ಯ ಪ್ರವಾಸದ ದಿನಾಂಕ ನಿಗದಿ ಮಾಡಲಿದ್ದೇವೆ ಎಂದರು.
ಮೈಸೂರಿನ ಅತ್ಯಾಚಾರ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಪ್ರಾಮಾಣಿಕವಾಗಿ ಅಪರಾಧಿಗಳನ್ನು ಹಿಡಿಯುವ ಕಾರ್ಯವನ್ನು ಮಾಡುತ್ತಿದ್ದಾರೆ. ಅಪರಾಧಿಗಳು ಸಿಕ್ಕೇ ಸಿಗುತ್ತಾರೆ. ಅಪರಾಧಿಗಳ ಮೇಲೆ ಕ್ರಮ ಕೈಗೊಳ್ಳುತ್ತೇವೆ. ಇನ್ನು ಮುಂದೆ ಈ ರೀತಿಯಾದ ಘಟನೆ ಆಗದಂತೆ ಅವರಿಗೆ ಶಿಕ್ಷೆ ನೀಡಲು ಯೋಚಿಸುವುದಿಲ್ಲ ಎಂದಿದ್ದಾರೆ. ಅಪರಾಧಿಗಳನ್ನು ಇಂದು ಅಥವಾ ನಾಳೆಯೊಳಗೆ ಹಿಡಿದೇ ಹಿಡಿಯುತ್ತೇವೆ. ಅಪರಾಧಿಗಳ ವಿರುದ್ದ ಸರಿಯಾದ ಕ್ರಮ ಕೈಗೊಂಡು ಇನ್ನು ಮುಂದೆ ಈ ರೀತಿ ಆಗದಂತೆ ಬಿಸಿ ಮುಟ್ಟಿಸುವ ಕಾರ್ಯವನ್ನು ಮಾಡುತ್ತೇವೆ ಎಂದು ತಿಳಿಸಿದ್ದಾರೆ.
Comments are closed.