ಬೆಂಗಳೂರು: ಮೈಸೂರು ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದ ಕರ್ನಾಟಕ ರಾಜ್ಯ ಪೊಲೀಸರಿಗೆ ನಟ ಜಗ್ಗೇಶ್ ಅಭಿನಂದನೆ ತಿಳಿಸಿದ್ದಾರೆ. ಅಲ್ಲದೇ ಈ ಪ್ರಕರಣ ಬೇಧಿಸಿದ ಪೊಲೀಸ್ ಸಿಬ್ಬಂದಿಗಳಿಗೆ ಒಂದು ಲಕ್ಷ ರೂ ಬಹುಮಾನ ನೀಡಿದ್ದಾರೆ.
ಕೆ.ಕೆ ಗೆಸ್ಟ್ ಹೌಸ್ನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಭೇಟಿಯಾದ ನಟ ಜಗ್ಗೇಶ್ ಮತ್ತು ಅವರ ಪತ್ನಿ ಪರಿಮಳ ಜಗ್ಗೇಶ್ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಒಂದು ಲಕ್ಷ ರೂ ಮೌಲ್ಯದ ಚೆಕ್ ನೀಡಿದರು.
ಈ ವೇಳೆ ಮಾತನಾಡಿದ ಅವರು, ಅಮಾಯಕ ಮಹಿಳೆ ಮೇಲೆ ದುಷ್ಕೃತ್ಯ ನಡೆಸಿದ ದುರುಳರನ್ನು ತನಿಖೆ ನಡೆಸಿ ಬಂಧಿಸಿದ್ದಾರೆ. ಪೊಲೀಸ್ ಸಿಬ್ಬಂದಿಗಳ ದಕ್ಷತೆಗೆ ಮೆಚ್ಚಿ ಬಹುಮಾನ ಕೊಟ್ಟಿದ್ದೇನೆ ಎಂದು ತಿಳಿಸಿದ್ದಾರೆ.
ಈ ಹಿಂದೆ ನಿರ್ಭಯಾ ಪ್ರಕರಣದ ಅಪರಾಧಿಗಳನ್ನು ಗಲ್ಲಿಗೇರಿಸಿದ್ದ ಹ್ಯಾಂಗ್ ಮ್ಯಾನ್ಗೆ ಕೂಡ ನವರಸ ನಾಯಕ ಜಗ್ಗೇಶ್ ಉಡುಗೊರೆ ಘೋಷಿಸಿ, ಹ್ಯಾಂಗ್ ಮ್ಯಾನ್ ಪವನ್ ಜಲ್ಲಾದ್ಗೆ ಜಗ್ಗೇಶ್ ಒಂದು ಲಕ್ಷ ಉಡುಗೊರೆಯನ್ನು ನೀಡಿದ್ದರು.
ಗೃಹಸಚಿವರ ಶ್ಲಾಘನೆ…
ಮೈಸೂರಿನಲ್ಲಿ ನಡೆದ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗಳನ್ನು ತಾಂತ್ರಿಕ ಸಾಕ್ಷಾಧಾರಗಳ ಮೂಲಕ ಶೀಘ್ರವಾಗಿ ಬಂಧಿಸಿದ ಪೋಲಿಸರಿಗೆ ನಟ ಜಗ್ಗೇಶ್ ದಂಪತಿಗಳು 1 ಲಕ್ಷ ರೂಪಾಯಿಗಳ ಚೆಕ್ ನೀಡಿ ಅಭಿನಂದಿಸಿದ್ದಾರೆ. ಶ್ರೀ ಜಗ್ಗೇಶ್ ರವರ ಕುಟುಂಬಕ್ಕೆ ಅಭಿನಂದನೆಗಳು ಎಂದಿದ್ದಾರೆ.
Comments are closed.