ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ 60 ವಸಂತಗಳ ಸಂಭ್ರಮ’ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ಇಂದು ಬೆಂಗಳೂರಿನಲ್ಲಿ ಚಾಲನೆ ನೀಡಿದರು.
ಕೆಂಪೇಗೌಡ ಬಸ್ ನಿಲ್ದಾಣಕ್ಕೆ 50 ವರ್ಷ ತುಂಬಿದ ಹಿನ್ನೆಲೆಯಲ್ಲಿ ಸ್ಮರಣ ಸಂಚಿಕೆ ಬಿಡುಗಡೆ ಹಾಗೂ 60 ವಸಂತಗಳ ಅಂಚೆ ಲಕೋಟೆ ಬಿಡುಗಡೆ ಮಾಡಿದರು. ಕೆಎಸ್ಆರ್ಟಿಸಿ ಸಿಬ್ಬಂದಿ, ಕುಟುಂಬದವರು, ಮಕ್ಕಳಿಗೆ ಉಚಿತ ವಿದ್ಯಾ ಕಲಿಕೆ ಕಾರ್ಯಕ್ರಮಕ್ಕೂ ಇದೇ ಸಂದರ್ಭದಲ್ಲಿ ಚಾಲನೆ ನೀಡಿದರು.
ಇದೇ ಸಂದರ್ಭದಲ್ಲಿ ನಾಲ್ಕು ಸಾರಿಗೆ ನಿಗಮಗಳಲ್ಲಿನ ಅಪಘಾತ ರಹಿತ ಚಾಲಕರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ ಪ್ರದಾನ ಮಾಡಲಾಯಿತು.
ಸಮಾರಂಭದಲ್ಲಿ ಸಾರಿಗೆ ಸಚಿವ ಬಿ.ಶ್ರೀರಾಮುಲು, ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಕೆ.ಎಸ್.ಆರ್.ಟಿ.ಸಿ ಅಧ್ಯಕ್ಷ ಚಂದ್ರಪ್ಪ, ಶಾಸಕ ರಿಜ್ವಾನ್ ಅರ್ಷದ್, ಕೆ.ಎಸ್.ಆರ್.ಟಿ.ಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ಮತ್ತಿತರರು ಉಪಸ್ಥಿತರಿದ್ದರು.
Comments are closed.