ಕರ್ನಾಟಕ

‘ನನ್ನ ಸಾವಿಗೆ ನಾನೇ ಕಾರಣ’- ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ನಟಿ ಸೌಜನ್ಯಾ

Pinterest LinkedIn Tumblr

ಬೆಂಗಳೂರು: ಕಿರುತೆರೆ ಹಾಗೂ ಸ್ಯಾಂಡಲ್ ವುಡ್ ನಟಿ ಸೌಜನ್ಯಾ (25) ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕೊಡಗು ಜಿಲ್ಲೆಯ ಕುಶಾಲನಗರ ಮೂಲದ ಸೌಜನ್ಯ ಅವರು ಬೆಂಗಳೂರು ದಕ್ಷಿಣ ಜಿಲ್ಲೆಯ ದೊಡ್ಡಬೆಲೆ ಗ್ರಾಮದ ಅಪಾರ್ಟ್‍ಮೆಂಟ್‍ನಲ್ಲಿ ತನ್ನ ಗೆಳೆಯ ವಿವೇಕ್ ಜೊತೆ ವಾಸವಾಗಿದ್ದರು. ವಿವೇಕ್‍ನನ್ನು ಊಟ ತರುವಂತೆ ಕಳುಹಿಸಿ ನಂತರ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದು ತಿಳಿದು ಬಂದಿಲ್ಲ. ‘ನನ್ನ ಸಾವಿಗೆ ನಾನೇ ಕಾರಣ’ ಎಂದು ಡೆತ್ ನೋಟಿನಲ್ಲಿ ಬರೆದಿದ್ದಾರೆ.

ನಟಿ ಸೌಜನ್ಯಾ ಅವರು ಚೌಕಟ್ಟು ಫನ್, ಸೇರಿದಂತೆ ಕೆಲವು ಸಿನಿಮಾಗಳಲ್ಲಿ ನಾಯಕಿಯಾಗಿ ಹಾಗೂ ದಾರಾವಾಹಿಗಳಲ್ಲಿ ನಟಿಸಿದ್ದರು.

ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Comments are closed.