ಕರ್ನಾಟಕ

ಕೊರೋನಾದಿಂದ ಮೃತಪಟ್ಟ ಪತಿ; ಮನನೊಂದು ಇಬ್ಬರು‌ ಮಕ್ಕಳೊಂದಿಗೆ ನೇಣಿಗೆ ಶರಣಾದ ಪತ್ನಿ

Pinterest LinkedIn Tumblr

ಬೆಂಗಳೂರು: ಕೋವಿಡ್ ಸೋಂಕಿಗೆ ತುತ್ತಾಗಿ ಪತಿ ಮೃತಪಟ್ಟ ಹಿನ್ನೆಲೆಯಲ್ಲಿ ಮನನೊಂದ ತಾಯಿ ತನ್ನ ಇಬ್ಬರು ಮಕ್ಕಳ ಜೊತೆಗೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ನಗರದ ಹೊರವಲಯದಲ್ಲಿ ಶುಕ್ರವಾರ ನಡೆದಿದೆ.

ತೋಟದ ಗುಡ್ಡದಹಳ್ಳಿ ಹತ್ತಿರದ ಪ್ರಕೃತಿ ಲೇಔಟ್’ನ ವಸಂತಾ (40), ಯಶವಂತ್ (15) ಹಾಗೂ ನಿಶ್ಚಿತಾ (8) ಮೃತ ದುರ್ದೈವಿಗಳಾಗಿದ್ದಾರೆ.

ಮನೆಯಲ್ಲಿ ತನ್ನ ಇಬ್ಬರು ಮಕ್ಕಳ ಜೊತೆ ವಸಂತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಮೃತರ ಮನೆಗೆ ಸಂಬಂಧಿಕರು ರಾತ್ರಿ ಬಂದಾಗ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬಿಎಂಟಿಸಿ ಚಾಲಕ ಹಾಗೂ ನಿರ್ವಾಹಕರಾಗಿದ್ದ ವಸಂತ ಅವರ ಪತಿಯು ಕಳೆದ ವರ್ಷ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರು. ಇದರಿಂದ ವಸಂತ ಅವರು ಖಿನ್ನತೆಗೊಳಗಾಗಿದ್ದು ಈ‌ ನೋವಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿಬರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಒಂದೇ ಫ್ಯಾನಿಗೆ ಮಗಳು ನಿಶ್ಚಿತಾ ಜೊತೆ ವಸಂತ ನೇಣು ಹಾಕಿಕೊಂಡಿದ್ದು ಯಶವಂತ್ ಪ್ರತ್ಯೇಕವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ಬಗ್ಗೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.