ಕರ್ನಾಟಕ

‘ಅಪ್ಪು ಅಮರ’- ಪುನೀತ್ ಪಾರ್ಥಿವ ಶರೀರವಿಟ್ಟಿರುವ ಕಂಠೀರವ ಸ್ಟೇಡಿಯಂ ಬಳಿ ಸಹಸ್ರಾರು ಅಭಿಮಾನಿಗಳು

Pinterest LinkedIn Tumblr

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಪಾರ್ಥಿವ ಶರೀರವನ್ನು ಸಾ ರ್ವಜನಿಕ ಅಂತಿಮ ದರ್ಶನಕ್ಕೆ ಕಂಠೀರವ ಕ್ರೀಡಾಂಗಣದಲ್ಲಿ ಇಡಲಾಗಿದೆ.

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೇರಿದಂತೆ ಗಣ್ಯಾತಿಗಣ್ಯರು ಆಗಮಿಸಿ ಖ್ಯಾತ ನಟನಿಗೆ ಅಂತಿಮ ನಮನ ಸಲ್ಲಿಸಿದ್ದಾರೆ.ಕ್ರೀಡಾಂಗಣದ ಹೊರಗೆ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ನೆರೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ವ್ಯಾಪಕ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.

ನೂರಾರು ಜನರು ಸ್ಟೇಡಿಯಂ ಒಳಗೆ ನುಗ್ಗಲು ಅಭಿಮಾನಿಗಳು ಯತ್ನಿಸಿದಾಗ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಸಾವಿರಾರು ಜನರು ಆಗಮಿಸಿರುವ ಹಿನ್ನಲೆಯಲ್ಲಿ ನೂಕು ನುಗ್ಗಲು ಉಂಟಾಗಿದೆ. ಅಭಿಮಾನಿಗಳು ‘‘ಅಪ್ಪು ಅಮರ’‘ ಎಂದು ಘೋಷಣೆಗಳನ್ನು ಕೂಗುತ್ತಿದ್ದಾರೆ. ಕಂಠೀರವ ಸ್ಟೇಡಿಯಂ ಬಳಿ ಆಕ್ರಂದನ ಮುಗಿಲು ಮುಟ್ಟಿದೆ.

ಸದಾಶಿವ ನಗರದಲ್ಲಿ ಅಘೋಷಿತ ಬಂದ್ ವಾತಾವರಣ ಕಂಡು ಬಂದಿದೆ. ಸ್ವಯಂ ಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳ ಬಾಗಿಲು ಹಾಕಲಾಗಿದೆ. ಕಂಠೀರವ ಸ್ಟೇಡಿಯಂನಲ್ಲಿ ಇಂದು ರಾತ್ರಿ ಮತ್ತು ನಾಳೆ ಸಂಪೂರ್ಣ ದಿನ ಅಭಿಮಾನಿಗಳಿಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ.

ಭಾನುವಾರ ಬೆಳಗ್ಗೆ ಕಂಠೀರವ ಸ್ಟುಡಿಯೋದಲ್ಲಿನ
ತಂದೆ ವರನಟ ಡಾ. ರಾಜ್ ಕುಮಾರ್ ಸಮಾಧಿ ಪಕ್ಕದಲ್ಲೇ ಪುನೀತ್ ಆವರ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದು ಬಂದಿದೆ. ಸಕಲ ಸರಕಾರಿ ಗೌರವಗಳೊಂದಿಗೆ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆ ನಡೆಯಲಿದೆ.

Comments are closed.