ಕರ್ನಾಟಕ

ಮಹಾಶಿವರಾತ್ರಿಯಂದು ಅವಳಿ ಗಂಡು ಮಕ್ಕಳ ತಾಯಿಯಾದ ನಟಿ ಅಮೂಲ್ಯ

Pinterest LinkedIn Tumblr

ಬೆಂಗಳೂರು: ಸ್ಯಾಂಡಲ್​ವುಡ್ ನಟಿ ಅಮೂಲ್ಯ ಮಹಾಶಿವರಾತ್ರಿಯಂದು ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಮಕ್ಕಳು ಹಾಗೂ ತಾಯಿ ಆರೋಗ್ಯವಾಗಿದ್ದಾರೆ ಎಂದು ಅಮೂಲ್ಯ ಅವರ ಪತಿ ಜಗದೀಶ್ ಆರ್ ಚಂದ್ರ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಅವರು ‘ಅಮೂಲ್ಯ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ. ತಾಯಿ ಹಾಗೂ ಮಕ್ಕಳು ಆರೋಗ್ಯವಾಗಿದ್ದಾರೆ. ಈ ಪಯಣದಲ್ಲಿ ಜತೆ ನಿಂತು ಹಾರೈಸಿದ ಎಲ್ಲರಿಗೆ ಧನ್ಯವಾದಗಳು’ ಎಂದು ಹೇಳಿದ್ದಾರೆ.

ನಟಿ ಅಮೂಲ್ಯ ಗಂಡು ಮಕ್ಕಳಿಗೆ ಜನ್ಮ ನೀಡುತ್ತಿದ್ದಂತೆ ಸ್ಯಾಂಡಲ್ ವುಡ್ ಕಲಾವಿದರು, ಅವರ ಗೆಳೆಯರು, ಅಭಿಮಾನಿಗಳು ಶುಭ ಹಾರೈಸಿದ್ದಾರೆ.

ನಟಿ ಅಮೂಲ್ಯ ರಾಜಕೀಯ ಹಿನ್ನೆಲೆಯ ಕುಟುಂಬದವರಾದ ಉದ್ಯಮಿ ಜಗದೀಶ್​ ಚಂದ್ರ ಜೊತೆ 2017ರ ಮೇ ತಿಂಗಳಲ್ಲಿ ಮದುವೆಯಾದ ಬಳಿಕ ನಟನೆಯಿಂದ ದೂರವುಳಿದಿದ್ದರು.

Comments are closed.