ಮುಂಬೈ

ಖ್ಯಾತ ಹಿನ್ನಲೆ ಗಾಯಕಿ ಲತಾ ಮಂಗೇಶ್ಕರ್ ಆಸ್ಪತ್ರೆಗೆ ದಾಖಲು.

Pinterest LinkedIn Tumblr

ನವದೆಹಲಿ: ಖ್ಯಾತ ಹಿನ್ನಲೆ ಗಾಯಕಿ ಲತಾ ಮಂಗೇಶ್ಕರ್ ಉಸಿರಾಟದ ಸಮಸ್ಯೆಯಿಂದ ಮುಂಬೈನ ಬ್ರೀಚ್​ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸೋಮವಾರ ಬೆಳಗಿನ ಜಾವ 2 ಗಂಟೆಗೆ ಅವರನ್ನು ಆಸ್ಪತ್ರೆಗೆ ಕರೆತರಲಾಯಿತು. ಪರಿಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಐಸಿಯುನಲ್ಲಿ ಇರಿಸಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಲತಾ ಮಂಗೇಶ್ಕರ್​ ಅವರ ಆರೋಗ್ಯ ಸದ್ಯ ಸ್ಥಿರವಾಗಿದೆ. ಮಂಗಳವಾರ ಅವರು ಆಸ್ಪತ್ರೆಯಿಂದ ಬಿಡುಗಡೆಯಾಗುವ ಸಾಧ್ಯತೆ ಇರುವುದಾಗಿ ಲತಾ ಮಂಗೇಶ್ಕರ್​ ಅವರ ತಂಗಿ ಉಷಾ ಮಂಗೇಶ್ಕರ್​ ಹೇಳಿದ್ದಾರೆ.

ಭಾರತ ರತ್ನ ಪ್ರಶಸ್ತಿ ಪುರಸ್ಕೃತ ಲತಾ ಮಂಗೇಶ್ಕರ್, ಪದ್ಮ ವಿಭೂಷಣ, ಪದ್ಮಭೂಷಣ ಮತ್ತು ದಾದಾ ಸಾಹೇಬ್​ ಫಾಲ್ಕೆ ಪ್ರಶಸ್ತಿ ಸೇರಿ ಹಲವು ಪ್ರತಿಷ್ಠಿ ಪ್ರಶಸ್ತಿಗಳಿಂದ ಗೌರವಿಸಲ್ಪಟ್ಟಿದ್ದಾರೆ.

Comments are closed.